ಗುಬ್ಬಿ: ದಾಬಸ್ಪೇಟೆ ಸಮೀಪ ಶುಕ್ರವಾರ ರಾತ್ರಿ ದ್ವಿಚಕ್ರ ವಾಹನ ಮತ್ತು ಟ್ರ್ಯಾಕ್ಟರ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ, ಪೊಲೀಸ್ ಹೆಡ್ ಕಾನ್ಸ್ಟೆಬಲ್ ಎಂ.ಬಸವರಾಜು (39) ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕಿಟ್ಟದಕುಪ್ಪೆ ಗ್ರಾಮದ ಬಸವರಾಜು ದಾಬಸ್ಪೇಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ದಾಬಸ್ಪೇಟೆ ಸಮೀಪದ ಸಿದ್ಧರಬೆಟ್ಟದಲ್ಲಿ ಹನುಮ ಜಯಂತಿ ಕಾರ್ಯಕ್ರಮಕ್ಕೆ ನಿಯೋಜನೆಗೊಂಡಿದ್ದರು. ಕರ್ತವ್ಯ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.