ತಿಪಟೂರು: ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಭೆ ಕಲ್ಪತರು ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಕೆ.ಷಡಕ್ಷರಿ ಮಾತನಾಡಿ, ಶಾಲಾ ಪ್ರಾರಂಭೋತ್ಸವ ಸಮಯದಲ್ಲಿ ಶಾಲೆಗಳಲ್ಲಿ ಸ್ವಚ್ಛತೆ ಮುಖ್ಯವಾಗಿದ್ದು, ಇದರ ನಿರ್ವಹಣೆಯನ್ನು ಮುಖ್ಯಶಿಕ್ಷಕರಿಗೆ ವಹಿಸಬೇಕಿದೆ ಎಂದರು.

ಶಾಸಕನ ಜವಾಬ್ದಾರಿ ಅರಿತು ಶಿಕ್ಷಣಕ್ಕೆ ಹಾಗೂ ಆರೋಗ್ಯಕ್ಕೆ ಒತ್ತು ನೀಡುತ್ತಿದ್ದೇವೆ. ಬಿಸಿಯೂಟದಲ್ಲಿ ಗುಣಮಟ್ಟ ಕಾಪಾಡಿ ಪೌಷ್ಟಿಕ ಆಹಾರವನ್ನು ಮಕ್ಕಳಿಗೆ ನೀಡಬೇಕಿದೆ. ಶಿಕ್ಷಕರು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಂಡು ಶಾಲೆಗಳಲ್ಲಿ ಸ್ವಚ್ಛ ವಾತಾವರಣ, ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ಬೋಧನೆ ಮಾಡುವುದು ಮುಖ್ಯ ಕರ್ತವ್ಯವಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಮಾತನಾಡಿ, ಶಾಲಾ ಪ್ರಾರಂಭೋತ್ಸವ ಸಮಯದಲ್ಲಿ ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಳ್ಳಬೇಕು. ಸ್ಥಳೀಯ ಎಸ್ಡಿಎಂಸಿ ಸದಸ್ಯರು, ಜನಪ್ರತಿನಿಧಿಗಳ ಸಹಯೋಗದಲ್ಲಿ ಉತ್ತಮ ವಾತವಾರಣದಲ್ಲಿ ಆಹ್ವಾನಿಸಿ ಎಂದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ದಕ್ಷಿಣ ಮೂರ್ತಿ ಮಾತನಾಡಿ, 2025-26ನೇ ಸಾಲಿನಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಚಟುವಟಿಕೆಗಳ ಮೂಲಕ ಏಕರೂಪ ಶಿಕ್ಷಣ ಬೋಧನೆ ನೀಡುವ ಜೊತೆಗೆ, ನೈಜ ಅನುಭವಗಳ ಮಾದರಿ ಒದಗಿಸಿ ಶಿಕ್ಷಕರು ವೃತ್ತಿ ದಕ್ಷತೆಯನ್ನು ಹೆಚ್ಚಿಸಿಕೊಳ್ಳುವುದರ ಕಡೆ ಗಮನಹರಿಸಬೇಕು ಎಂದು ಹೇಳಿದರು.

ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಮಂತ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ದಕ್ಷಿಣ ಮೂರ್ತಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಂ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಪಟ್ಟಾಭಿರಾಮು, ಅಕ್ಷರ ದಾಸೋಹ ಸಹಾಯಕ ನಿರ್ಧೇಶಕ ಶಿವಶಂಕರ್, ನೊಣವಿನಕೆರೆ ಶಾಲೆಯ ಪದವೀದರ ಮುಖ್ಯಶಿಕ್ಷಕ ಸುರೇಶ್ ಎಸ್.ಆರ್, ಖಾಸಗಿ ಶಾಲೆಗಳ ಸಂಘದ ಕಾರ್ಯದರ್ಶಿ ಮುರುಳಿ ಹಾಜರಿದ್ದರು.

ಆರೋಗ್ಯ ಸಚಿವರು ತಾಲ್ಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆ ಚೆನ್ನಾಗಿದೆ ಎಂದು ಹೇಳಿದರು. ಆದರೆ ಶಿಕ್ಷಣ ಸಚಿವರು ಬಂದಾಗ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿ ಚೆನ್ನಾಗಿದೆ ಎಂದು ಹೇಳಬೇಕಿತ್ತು. ಆದರೆ ತಾಲ್ಲೂಕಿನಲ್ಲಿ ಬಿಇಒ ಕಚೇರಿ ಟಾರ್ಪಲ್ನಿಂದ ಮುಚ್ಚಲಾಗಿದೆ. ಶಿಕ್ಷಣ ಸಚಿವರ ಕ್ಷೇತ್ರದಲ್ಲಿ ಇಂತಹ ಸ್ಥಿತಿಯಿದೆ ಎಂದರು.

ಶಾಸಕ ಹಾಗೂ ಸಚಿವರು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಿದಾಗ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.