ಮಂಗಳವಾರ, ಜೂನ್ 28, 2022
28 °C

ಆರೋಗ್ಯ ಕಾರ್ಡ್‌ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕನಾಯಕನಹಳ್ಳಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿ ಸದಸ್ಯರು ವಿಮಾ ಯೋಜನೆಗೆ ಒಳಪಡಬೇಕು. ಹಾಗೆಯೇ ಆರೋಗ್ಯಯುತ ಜೀವನ ನೆಡಸಬೇಕು ಎಂಬುದು ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆ ಅವರ ಆಶಯವಾಗಿದೆ ಎಂದು ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಎಲ್.ಬಿ. ಪ್ರೇಮಾನಂದ ತಿಳಿಸಿದರು.

ತಾಲ್ಲೂಕಿನ ಕಾನಕೆರೆಯಲ್ಲಿ ಸೋಮವಾರ ಸ್ವಸಹಾಯ ಸಂಘಗಳ ಸದಸ್ಯರಿಗೆ ಆರೋಗ್ಯ ರಕ್ಷಾ ಕಾರ್ಡ್‌ ವಿತರಿಸಿ ಮಾತನಾಡಿದರು.

ಕಾರ್ಡ್‌ ಹೊಂದಿರುವ ಸದಸ್ಯರು ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೆ
₹ 10 ಸಾವಿರ ಮೊತ್ತದ ಸೌಲಭ್ಯ ಪಡೆಯಬಹುದು ಎಂದರು.

ಗ್ರಾಮ ಪಂಚಾಯಿತಿ ಸದಸ್ಯೆ ಪಲ್ಲವಿ, ವಲಯ ಮೇಲ್ವಿಚಾರಕಿ ಧನಲಕ್ಷ್ಮೀ, ಕಾಂತಿಮಣಿ, ದೇವರಾಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು