ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರಬೇಕಿದೆ 33 ಜನರ ಗಂಟಲು ದ್ರವ ಪರೀಕ್ಷೆ ಮಾಹಿತಿ

Last Updated 27 ಮಾರ್ಚ್ 2020, 14:39 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಶಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಸೋಂಕು ತಗುಲಿದೆಯೇ ಇಲ್ಲವೆ ಎನ್ನುವುದನ್ನು ಪತ್ತೆ ಮಾಡಲು ಜಿಲ್ಲಾ ಆಸ್ಪತ್ರೆಯ ವೈದ್ಯರು ಕಫ, ರಕ್ತ ಹಾಗೂ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ ಬೆಂಗಳೂರಿನ ವೈರಾಣು ಸಂಶೋಧನಾ ಕೇಂದ್ರಕ್ಕೆ ಕಳುಹಿಸುತ್ತಲೇ ಇದ್ದಾರೆ. ದಿನದಿಂದ ದಿನಕ್ಕೆ ಹೀಗೆ ಶಂಕಿತರ ಸಂಖ್ಯೆ ಹೆಚ್ಚುತ್ತಿದೆ.

ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 474 ಜನರ ಮೇಲೆ ನಿಗಾ ಇಡಲಾಗಿದೆ. ಇವರಲ್ಲಿ 33 ಜನರ ರಕ್ತ, ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಮಾಹಿತಿ ಬರಬೇಕಿದೆ.

339 ಜನರನ್ನು ಮನೆಯಲ್ಲಿಯೇ ನಿಗಾದಲ್ಲಿ ಇರಿಸಲಾಗಿದೆ. 38 ಮಂದಿ ಜಿಲ್ಲಾ ಆಸ್ಪತ್ರೆಯ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 196 ಜನರ ಮನೆಯಲ್ಲಿಯೇ ನಿಗಾದಲ್ಲಿರುವ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT