ಭಾನುವಾರ, ಜೂಲೈ 12, 2020
29 °C

ತುಮಕೂರು ಜಿಲ್ಲೆಯಾದ್ಯಂತ ಆರೋಗ್ಯ ಸಮೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಜಿಲ್ಲೆಯಲ್ಲಿ ಐದು ಕೊರೊನಾ ಸೋಂಕಿನ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಮನೆಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯಿತಿ ಅಧಿಕಾರಿಗಳು, ಕಂದಾಯ ಹಾಗೂ ಮತಗಟ್ಟೆ ಅಧಿಕಾರಿಗಳು ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವರು.

‘ಪ್ರತಿ ಮನೆ ಮನೆಗೂ ಕಾರ್ಯಕರ್ತೆಯರು ಭೇಟಿ ನೀಡಿ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸುವರು. ಗಂಭೀರ ಕಾಯಿಲೆಗಳು ಇರುವವರ ಬಗ್ಗೆ ನಿಗಾವಹಿಸುವರು. ಇಂತಹ ಕಾಯಿಲೆಗಳಿದ್ದರೆ ಸಮರ್ಪಕ ಮಾಹಿತಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಸಮೀಕ್ಷೆಗೆ ಬಂದಾಗ ಇವರಿಗೆ ಸರಿಯಾದ ಮಾಹಿತಿ ನೀಡಬೇಕು. ಯಾರಾದರೂ ಕಾರ್ಯಕ್ಕೆ ಅಡ್ಡಿಪಡಿಸಿದರೆ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು