ಬುಧವಾರ, ಸೆಪ್ಟೆಂಬರ್ 30, 2020
21 °C

ಧರೆಗುರುಳಿದ ಮರ: ವಾಹನ ಸವಾರ ಪಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು: ಭಾರೀ ಮಳೆಯಿಂದಾಗಿ ನಗರದ ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಬಿದ್ದಿದ್ದು, ವಾಹನ ಸವಾರ ಪ್ರಣಾಪಾಯದಿಂದ ಪಾರಾಗಿದ್ದಾರೆ.

ನಗರದ ಕಲ್ಪತರು ಕ್ರೀಡಾಂಗಣದ ಮುಂಭಾಗ ಇದ್ದ ಮರ ಮಳೆಯ ರಭಸಕ್ಕೆ ಬುಡಸಮೇತ ರಸ್ತೆಗೆ ಬಿದ್ದಿದೆ. ಇದರಿಂದ ಕೆಲಗಂಟೆಗಳ ಕಾಲ ರಸ್ತೆ ಸಂಚಾರ ಅಸ್ಥವ್ಯಸ್ಥಗೊಂಡಿತ್ತು. ಜತೆಗೆ 4-5 ವಿದ್ಯುತ್ ಕಂಬಗಳು ಸಹ ಧರೆಗುಳಿವೆ.

ಮರ ಬೀಳುವ ಸಮಯಕ್ಕೆ ವಾಹನವೊಂದು ಅದೇ ಸ್ಥಳದಲ್ಲಿ ಸಾಗುತ್ತಿತ್ತು. ವಾಹನ ಚಾಲಕ ಕ್ಷಣಾರ್ಧದಲ್ಲೇ ಬ್ರೇಕ್ ಹಾಕಿ ವಾಹನದ ದಿಕ್ಕನ್ನು ಬದಲಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನ ಸಂಚಾರ ಕಡಿಮೆ ಇದ್ದಿದ್ದರಿಂದ ಚಾಲಕ ತನ್ನನ್ನು ರಕ್ಷಿಸಿಕೊಳ್ಳಲು ಸಾಧ್ಯವಾಯಿತು ಎನ್ನುತ್ತಾರೆ ಪ್ರತ್ಯಕ್ಷದರ್ಶಿಗಳು.

ಅರಣ್ಯ ಇಲಾಖೆ ಸಿಬ್ಬಂದಿ ಮರ ಕಡಿದು ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು