ಗುರುವಾರ , ಜುಲೈ 7, 2022
20 °C

ತುರುವೇಕರೆ| ಮಳೆ ಗಾಳಿಗೆ ಉರುಳಿದ ವಿದ್ಯುತ್ ಕಂಬ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತುರುವೇಕೆರೆ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ರಾತ್ರಿ ಮಳೆ, ಗಾಳಿಗೆ 15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.
ಪಟ್ಟಣದ ಮಾಯಸಂದ್ರ ರಸ್ತೆ ಮತ್ತು ದಬ್ಬೇಘಟ್ಟ ರಸ್ತೆ ಬದಿಯ ಮರಗಳ ಕೊಂಬೆಗಳು ಗಾಳಿಗೆ ಮುರಿದು ವಿದ್ಯುತ್ ತಂತಿ ಮೇಲೆ ಬಿದ್ದು ಲೈನ್ ತುಂಡರಿಸಿವೆ.

ಹುಲಿಕಲ್, ಹೆಗ್ಗೆರೆಯಲ್ಲಿ ರಸ್ತೆಗೆ ಮರ ಮತ್ತು ವಿದ್ಯುತ್ ಕಂಬಗಳು ಬಾಗಿ ಸಂಚಾರಕ್ಕೆ ತೊಂದರೆಯಾಗಿದೆ. ಪಟ್ಟಣ ಸೇರಿದಂತೆ ತಾಲ್ಲೂಕಿನ ಕೆಲವೆಡೆ ವಿದ್ಯುತ್ ವ್ಯತ್ಯವಾಗಿದೆ. ಬೆಸ್ಕಾಂ ಬ್ಬಂದಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು