ಶನಿವಾರ, ಜನವರಿ 18, 2020
20 °C

ಹೆಬ್ಬೂರು: ರಸ್ತೆ ಬದಿ ಅಂಗಡಿ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಬ್ಬೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಸ್ತೆ ಬದಿಯ ಅಂಗಡಿಗಳನ್ನು ಶನಿವಾರ ತೆರವುಗೊಳಿಸಲಾಯಿತು.

ರಸ್ತೆ ಬದಿ ಅಂಗಡಿಗಳಿಂದ ಪಾದಚಾರಿಗಳಿಗೆ ತೊಂದರೆ ಆಗುತ್ತಿತ್ತು. ಅಲ್ಲದೆ, ಅಪಘಾತ ಪ್ರಕರಣ ಹೆಚ್ಚಾಗಿದ್ದವು. ಅದನ್ನು ತಪ್ಪಿಸಲು ಸಾರ್ವಜನಿಕರ ಹಿತದೃಷ್ಟಿಯಿಂದ ಗ್ರಾಮ ಪಂಚಾಯಿತಿಯಿಂದ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ವ್ಯಾಪಾರಸ್ಥರಿಗೆ ಬೇರೆ ಸ್ಥಳದಲ್ಲಿ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು ಗೋವಿಂದರಾಜು ಹೇಳಿದರು.

ಉಪಾಧ್ಯಕ್ಷೆ ಮಂಜುಳಾ, ಗ್ರಾಮ ಪಂಚಾಯಿತಿ ಪಿಡಿಒ ಜ್ಯೋತಿ ಮತ್ತು ಸಿಬ್ಬಂದಿ ಇದ್ದರು. ಹೆಬ್ಬೂರು ಠಾಣೆ ಎಸ್ಐ ಸುಂದರ್ ಮತ್ತು ಸಿಬ್ಬಂದಿ ಕಾರ್ಯಾಚರಣೆಗೆ ತೊಂದರೆಯಾಗದಂತೆ ಸಹಕರಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು