ಪಾವಗಡ: ‘ಸಮಾಜದಲ್ಲಿ ಉನ್ನತ ಸ್ಥಾನದಲ್ಲಿ ಇರುವವರು ಹಿಂದುಳಿದಿರುವ ಮಕ್ಕಳ ಶಿಕ್ಷಣಕ್ಕೆ ಸಹಕಾರ ನೀಡಿ ಸಮಾಜದ ಋಣ ತೀರಿಸಿಕೊಳ್ಳಬೇಕು’ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅನಿಲ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ನಿಡಗಲ್ ಹೋಬಳಿಯ ಟಿ.ಎನ್. ಬೆಟ್ಟದಲ್ಲಿ ಶನಿವಾರ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರು ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ನೌಕರಿಯಲ್ಲಿರುವವರು, ಸ್ಥಿತಿವಂತರು ಬಡಮಕ್ಕಳ ಶಿಕ್ಷಣಕ್ಕೆ ಅಗತ್ಯ ನೆರವು ನೀಡಬೇಕು ಎಂದು ಸಲಹೆ ನೀಡಿದರು.

ವಾಲ್ಮೀಕಿ ಪೀಠದ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ, ‘ವಾಲ್ಮೀಕಿ ಅವರ ತತ್ವ, ಆದರ್ಶಗಳನ್ನು ಸಮುದಾಯದ ಜನರು ಮೈಗೂಡಿಸಿಕೊಳ್ಳಬೇಕು. ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.

ತಾಲ್ಲೂಕು ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳೇಗಾರ ಲೋಕೇಶ, ಅಯೋಧ್ಯೆಯಲ್ಲಿ ರಾಮಮಂದಿರದ ಜೊತೆಯಲ್ಲಿ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಾಣ ಮಾಡಬೇಕು. ತುಮಕೂರು ವಿಶ್ವವಿದ್ಯಾಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆ ಮಾಡಬೇಕು ಎಂದುಕೋರಿದರು.

ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಸೀನಪ್ಪ, ಚಿತ್ತಗಾನಹಳ್ಳಿ ಚಂದ್ರಶೇಖರ್, ಕೆ.ಟಿ.ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಓಬಮ್ಮ, ಮುಖ್ಯಶಿಕ್ಷಕ ನರಸಪ್ಪ, ಮುಖಂಡ ಓಂಕಾರ್ ನಾಯಕ, ಕನ್ನಮೇಡಿ ಸುರೇಶ್, ಅಂಬಿಕಾ ರಮೇಶ್, ನಾಗರಾಜ್, ಶಿವಣ್ಣ, ಈರಣ್ಣ, ನಾಗಣ್ಣ, ರಾಜಕುಮಾರ್, ಬೋರಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.