ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಗುಡನಹಳ್ಳಿಗೆ ಹರಿದ ಹೇಮೆ

Last Updated 2 ಜೂನ್ 2021, 1:58 IST
ಅಕ್ಷರ ಗಾತ್ರ

ತುಮಕೂರು: ನಗರದ ಕುಡಿಯುವ ನೀರಿನ ಜಲ ಸಂಗ್ರಹಗಾರ ಬುಗುಡನಹಳ್ಳಿ ಕೆರೆಗೆ ಸೋಮವಾರ ತಡ ರಾತ್ರಿ 12 ಗಂಟೆಗೆ
ಗೊರೂರು ಜಲಾಶಯದಿಂದ ಬಿಟ್ಟಿದ್ದ ಹೇಮಾವತಿ ನೀರು ಬಂದು ತಲುಪಿದೆ.

ಗೊರೂರು ಜಲಾಶಯದಿಂದ 2 ಸಾವಿರ ಕ್ಯೂಸೆಕ್‌ ನೀರನ್ನು ಹೊರಗೆ ಬಿಟ್ಟಿದ್ದು, ಬಾಗೂರುನವಿಲೆ ಗೇಟ್‌ ಮೂಲಕ 1,100 ಕ್ಯೂಸೆಕ್ ಹರಿದು ಬರುತ್ತಿದೆ. ನಂತರ ಕಾಲುವೆಯಲ್ಲಿ 400ರಿಂದ 500 ಕ್ಯೂಸೆಕ್‌ನಷ್ಟು ನೀರು ಹರಿದು ಬಂದು ಬುಗುಡನಹಳ್ಳಿ ಕೆರೆ ಸೇರುತ್ತಿದೆ.

ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಿಕೊಳ್ಳಬಹುದಾಗಿದೆ. ಬುಗುಡನಹಳ್ಳಿ ಕೆರೆ ಬರಿದಾಗುವ ಹಂತ ತಲುಪಿದ್ದ ಸಮಯದಲ್ಲಿ ಹೇಮಾವತಿಯಿಂದ ನೀರು ಬಿಟ್ಟಿರುವುದು ನಗರದ ಜನರು ನಿಟ್ಟುಸಿರು ಬಿಡುವಂತಾಗಿದೆ. ಬೇಸಿಗೆಯಲ್ಲಿ ಕೊಳವೆ ಬಾವಿ ಆಶ್ರಯಿಸಿ, ಟ್ಯಾಂಕರ್ ಮೂಲಕ ನೀರು ನೀಡುವಂತಹ ಪರಿಸ್ಥಿತಿ ನಿರ್ಮಾಣವಾಗಬೇಕಿತ್ತು. ಸದ್ಯಕ್ಕೆ ನಗರದ ನೀರಿನ ಸಮಸ್ಯೆ ನೀಗಿದಂತಾಗಿದೆ.

ಶಾಸಕರ ತಂಡ ಭೇಟಿ: ಬುಗುಡನಹಳ್ಳಿ ಕೆರೆಗೆ ಹೇಮಾವತಿ ನೀರು ಹರಿದು ಬರುತ್ತಿದ್ದು ಶಾಸಕ ಜಿ.ಬಿ.ಜ್ಯೋತಿಗಣೇಶ್ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಮೇಯರ್, ಸದಸ್ಯರು ಹಾಗೂ ಅಧಿಕಾರಿಗಳ ತಂಡ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT