ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್–ಕೇಸರಿ ಶಾಲು ವಿವಾದ: ತಿಪಟೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ

Last Updated 8 ಫೆಬ್ರುವರಿ 2022, 7:34 IST
ಅಕ್ಷರ ಗಾತ್ರ

ತಿಪಟೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ಎರಡು ಕೋಮಿನವರು ಹಿಜಾಬ್–ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಮಂಗಳವಾರ ಕಾಲೇಜು ಬಳಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಸಮವಸ್ತ್ರ ಧರಿಸಿ ಬಂದವರಿಗೆ ಕಾಲೇಜಿಗೆ ಪ್ರವೇಶ ನೀಡಲಾಯಿತು. ಇದನ್ನು ವಿರೋಧಿಸಿ ಕೆಲವರು ಕಾಲೇಜಿನ ಗೇಟ್ ಬಳಿ ಗೊಂದಲ ಸೃಷ್ಟಿಸಿದರು. ನಂತರ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳು, ಪೋಷಕರ ಜತೆ ಸೇರಿಕೊಂಡು ಪ್ರತಿಭಟನೆ ನಡೆಸಿದರು. ನಂತರ ಕೇಸರಿ ಶಾಲು ಧರಿಸಿ ಬಂದವರು ಸಹ ಪ್ರತಿಭಟನೆಗೆ ಇಳಿದರು.

ಇದರಿಂದ ಕೆಲ ಸಮಯ ಗೊಂದಲದ ವಾತಾವರಣ ನಿರ್ಮಾಣವಾಯಿತು. ಒಂದು ರೀತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ನಂತರ ಸ್ಥಳಕ್ಕೆ ಬಂದ ಪೊಲೀಸರು, ಎರಡು ಗುಂಪಿನವರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT