ತುಮಕೂರು: ಜಿಲ್ಲೆಯಲ್ಲಿ ಕಳೆದ ಐದು ವರ್ಷದಲ್ಲಿ ಹೊಸದಾಗಿ 2,521 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

2020–21ರಿಂದ 2024–25ರ ವರೆಗೆ 6,12,730 ಸಾಮಾನ್ಯ ಜನರು ಎಚ್ಐವಿ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಪೈಕಿ 2,406 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದೇ ಅವಧಿಯಲ್ಲಿ 2,92,870 ಗರ್ಭಿಣಿಯರು ಪರೀಕ್ಷೆ ಮಾಡಿಸಿಕೊಂಡಿದ್ದು, 145 ಮಹಿಳೆಯರಲ್ಲಿ ಎಚ್ಐವಿ ಇರುವುದು ಖಚಿತ ಪಟ್ಟಿದೆ. ಗರ್ಭಿಣಿಯರಲ್ಲಿ ಸೋಂಕು ಹರಡುವಿಕೆ ಇಳಿಮುಖವಾಗುತ್ತಿದೆ.

2022–23ರಲ್ಲಿ 482 ಮಂದಿಗೆ ಸೋಂಕು ಹರಡಿತ್ತು, 2024–25ರಲ್ಲಿ 530ಕ್ಕೆ ಜಿಗಿದಿದೆ. ಪ್ರಸ್ತುತ ಜಿಲ್ಲೆಯಾದ್ಯಂತ 14,178 ಸೋಂಕಿತರಿದ್ದಾರೆ. ಇದರಲ್ಲಿ 20ರಿಂದ 40 ವರ್ಷದ ಒಳಗಿನವರ ಸಂಖ್ಯೆ ಹೆಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕಾದ ಯುವ ಸಮೂಹ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ನಿರ್ಲಕ್ಷ್ಯ, ಮಾಹಿತಿ ಕೊರತೆಯಿಂದ ರೋಗ ತಂದುಕೊಳ್ಳುತ್ತಿದ್ದಾರೆ.

ಎಚ್ಐವಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆ ಸೇರಿ ಒಟ್ಟು 6 ಕಡೆಗಳಲ್ಲಿ ಎಆರ್ಟಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಕೇಂದ್ರಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಲಸಿಕೆ, ಔಷಧಿ ವಿತರಿಸಲಾಗುತ್ತದೆ. ರೋಗಿಗಳಿಗೆ ಆಪ್ತ ಸಮಾಲೋಚನೆ, ಸೂಕ್ತ ಮಾರ್ಗದರ್ಶನ ಒಳಗೊಂಡಂತೆ ಉಚಿತವಾಗಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದಿಂದ ಹದಿಹರೆಯದವರನ್ನು ಗುರಿಯಾಗಿಸಿಕೊಂಡು ಜಾಗೃತ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾಲೇಜುಗಳಲ್ಲಿ ರೆಡ್ ರಿಬ್ಬನ್ ಕ್ಲಬ್ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಎಚ್ಐವಿ ಕುರಿತು ಅರಿವು ಮೂಡಿಸಲಾಗುತ್ತಿದೆ. ಬೀದಿ ನಾಟಕ, ಚಿತ್ರಕಲೆ ಇತರೆ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ 16 ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳು (ಐಸಿಟಿಸಿ) ಕಾರ್ಯ ನಿರ್ವಹಿಸುತ್ತಿವೆ. 171 ಪ್ರಾಥಮಿಕ ಆರೋಗ್ಯ ಕೇಂದ್ರ, 16 ಖಾಸಗಿ ಆಸ್ಪತ್ರೆಗಳಲ್ಲಿಯೂ ಐಸಿಟಿಸಿ ಸೇವೆ ಲಭ್ಯವಿದೆ.

ಇಂದು ಜಾಥಾ: ಡಿ. 1ರಂದು ವಿಶ್ವ ಏಡ್ಸ್ ದಿನದ ಪ್ರಯುಕ್ತ ಎಚ್ಐವಿ ನಿಯಂತ್ರಣದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಾಥಾಗೆ ಚಾಲನೆ ನೀಡಲಾಗುತ್ತದೆ. ಟೌನ್ಹಾಲ್, ಅಶೋಕ ರಸ್ತೆ ಮಾರ್ಗವಾಗಿ ಸ್ವಾತಂತ್ರ್ಯ ಚೌಕ, ಕೋಟೆ ಆಂಜನೇಯ ಸ್ವಾಮಿ ವೃತ್ತದ ಮುಖಾಂತರ ಸಾಗಿ ಏಡ್ಸ್ ನಿಯಂತ್ರಣಾಧಿಕಾರಿ ಕಚೇರಿ ಬಳಿ ಕೊನೆಯಾಗಲಿದೆ.

ಪಾಸಿಟಿವಿಟಿ ದರ ಕಡಿಮೆ

ಜಿಲ್ಲೆಯಲ್ಲಿ ಎಚ್ಐವಿ ಪಾಸಿಟಿವಿಟಿ ದರ ತಗ್ಗಿದೆ. ಎಲ್ಲ ಕಡೆಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರಮುಖವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಈ ಕುರಿತು ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗುತ್ತಿದೆ. ಡಾ.ಆರ್.ವಿ.ಮೋಹನ್ದಾಸ್ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.