ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಳ್ಳು ಹೇಳಿಕೆ ಅಕ್ಷಮ್ಯ: ನಾಗೇಶ್‌

Last Updated 26 ಏಪ್ರಿಲ್ 2022, 5:35 IST
ಅಕ್ಷರ ಗಾತ್ರ

ತಿಪಟೂರು: ‘ಹಿಂದಿನ ಸರ್ಕಾರದ ಅವಧಿಯಲ್ಲಿ ದಿನೇಶ್ ಅಮಿನ್ ಮಟ್ಟು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಲ್ಲಿದ್ದರು. ಆಗ ಅವರಿಗೆ ಟಿಪ್ಪು ಸುಲ್ತಾನ್‌ ಬಗ್ಗೆ ಇದ್ದಂತಹ ಕಾಳಜಿಯ ಜೊತೆಗೆ ಡಾ.ಬಿ.ಆರ್. ಅಂಬೇಡ್ಕರ್ ಚಿಂತನೆಗಳನ್ನು ಪಠ್ಯದಲ್ಲಿ ಸೇರಿಸುವ ಕಾರ್ಯ ಮಾಡಬಹುದಿತ್ತು’ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯಿಸಿದರು.

ನಗರದಲ್ಲಿ ಸೋಮವಾರ ನಡೆದ ತಾಲ್ಲೂಕುಮಟ್ಟದ ಆರೋಗ್ಯ ಮೇಳದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಚಿಂತನೆ, ವಿಚಾರಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತಾ ಬಂದಿದೆ. ಈಗಾಗಲೇ, ಪಠ್ಯದಲ್ಲಿಯೂ ಅಳವಡಿಸಲಾಗಿದೆ ಎಂದರು.

ದಿನೇಶ್ ಅಮಿನ್ ಮಟ್ಟು ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರರಾಗಿದ್ದರು. ಅಂದಿನ ಸರ್ಕಾರದಲ್ಲಿ ಮಾಡದ ಕಾರ್ಯದ ಬಗ್ಗೆ ಮತ್ತೊಬ್ಬರಿಗೆ ತಿಳಿಹೇಳುವ ಪೊಳ್ಳು ಹೇಳಿಕೆ, ಮಾತುಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇದ್ದಾಗ ಕಾಂಗ್ರೆಸ್ ಪಕ್ಷ ಹೇಗೆ ನಡೆಸಿಕೊಂಡಿದೆ ಎಂಬುದನ್ನು ಅರಿಯುವ ಅಗತ್ಯವಿದೆ. ಈಗಾಗಲೇ, ಅಂಬೇಡ್ಕರ್‌ ಚಿಂತನೆಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲಾಗಿದೆ. ದೇಶದಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂಬುದು ಎಲ್ಲರಿಗೂ ಅನ್ನಿಸಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT