ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಗುಡಿಸಲು ಭಸ್ಮ: ಸ್ಥಳಕ್ಕೆ ಪರಮೇಶ್ವರ ಭೇಟಿ

Published 29 ಏಪ್ರಿಲ್ 2024, 4:43 IST
Last Updated 29 ಏಪ್ರಿಲ್ 2024, 4:43 IST
ಅಕ್ಷರ ಗಾತ್ರ

ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಚಿಂಪುಗಾನಹಳ್ಳಿಯಲ್ಲಿ 10 ಗುಡಿಸಲುಗಳು ಬೆಂಕಿಗಾಹುತಿಯಾದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಭಾನುವಾರ ಭೇಟಿ ನೀಡಿ ಸಂತ್ರಸ್ತರಿಗೆ ಮನೆ ನಿರ್ಮಿಸಿ ಕೊಡುವ ಭರವಸೆ ನೀಡಿದರು.

ಏ.26 ರಂದು ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗುಡಿಸಲು ಸುಟ್ಟು ಹೋಗಿದ್ದವು. ಪರಮೇಶ್ವರ ಸೂರು ಕಳೆದುಕೊಂಡವರ ಪಟ್ಟಿ ಪಡೆದು ವೈಯಕ್ತಿಕವಾಗಿ ಪರಿಹಾರ ವಿತರಿಸಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿ, ಈ ಹಿಂದೆಯೂ ಇದೇ ರೀತಿಯಾಗಿತ್ತು. ಇಲ್ಲಿನ ನಿವಾಸಿಗಳಿಗೆ ನಿವೇಶನ ನೀಡಲು 9 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದೆ. ಚುನಾವಣೆ ನಂತರ ಜಾಗ ಹಂಚಿಕೆ ಮಾಡಿ, ಮನೆ ನಿರ್ಮಿಸಿ ಕೊಡಲಾಗುವುದು. ಅವಿಭಕ್ತ ಕುಟುಂಬಗಳ ಚಿಕ್ಕ ಕುಟುಂಬಗಳಾಗಿ ವಿಭಜನೆಯಾಗುತ್ತಿವೆ. ಎಲ್ಲರಿಗೂ ಮನೆ ಕಟ್ಟಿಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಕೆಲವರು ಖಾಲಿ ಇರುವ ಸರ್ಕಾರಿ ಜಮೀನುಗಳಲ್ಲಿ ಗುಡಿಸಿಲು ಹಾಕಿಕೊಂಡರೆ ನಿವೇಶನ ನೀಡುತ್ತಾರೆ ಎನ್ನುವ ಮನೋಭಾವದಲ್ಲಿ ಇದ್ದಾರೆ. ಜನಪ್ರತಿನಿಧಿಗಳ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಅರ್ಹರಿಗೆ ಮಾತ್ರ ನಿವೇಶನ ಮಂಜೂರು ಮಾಡಬೇಕು ಎಂದು ತಿಳಿಸಿದರು.

ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಮುಖಂಡರಾದ ಕೊಡ್ಲಹಳ್ಳಿ ಅಶ್ವತ್ಥನಾರಾಯಣ, ಅರಕೆರೆ ಶಂಕರ್, ಮಹಾಲಿಂಗಪ್ಪ, ನಾಗರಾಜು, ಜಯರಾಂ, ದೇವರಾಜು, ರಘು, ದರ್ಶನ್, ಕೆಂಪರಾಜು, ಶಿವಕುಮಾರ್‌ ಮೊದಲಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT