ಶನಿವಾರ, ಜನವರಿ 16, 2021
28 °C

ಗೃಹರಕ್ಷಕ ದಳದ ಸೇವೆ ಶ್ಲಾಘನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಪೊಲೀಸರಿಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿರುವ ಗೃಹರಕ್ಷಕ ದಳದ ಕಾರ್ಯ ಶ್ಲಾಘನೀಯ ಎಂದು ಏಳನೇ ಅಧಿಕ ಜಿಲ್ಲಾ ನ್ಯಾಯಾಧೀಶರಾದ ಎಸ್.ಸುಧೀಂದ್ರನಾಥ್ ಅಭಿಪ್ರಾಯಪಟ್ಟರು.

ಜಿಲ್ಲಾ ಗೃಹರಕ್ಷಕ ದಳದಿಂದ ಹಮ್ಮಿಕೊಂಡಿದ್ದ ಗೃಹರಕ್ಷಕ ದಳದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಸಮಾಜದಲ್ಲಿ ಫಲಾಪೇಕ್ಷೆ ಹಾಗೂ ದಬ್ಬಾಳಿಕೆ ಇಲ್ಲದೆ ಸ್ವಯಂ ಪ್ರೇರಿತರಾಗಿ ಸಮಾಜ ಸೇವೆ ಮಾಡುತ್ತಿದ್ದು, ಇತರರಿಗೆ ಮಾದರಿ
ಯಾಗಿದ್ದಾರೆ’ ಎಂದು ಸ್ಮರಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್, ‘ಶಿರಾ ಉಪಚುನಾವಣೆ, ಕೋವಿಡ್-19 ಲಾಕ್‌ಡೌನ್, ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಪೊಲೀಸರಿಗೆ ಹೆಗಲುಕೊಟ್ಟು ಗೃಹರಕ್ಷಕರು ಕೆಲಸ ನಿರ್ವಹಿಸಿದ್ದಾರೆ’ ಎಂದು ನೆನಪಿಸಿಕೊಂಡರು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಹಾಲಿಂಗಪ್ಪ ಎಸ್.ಲಂಗೋಟಿ, ‘ಗೃಹರಕ್ಷಕ ದಳ, ಅಗ್ನಿಶಾಮಕ, ಪೊಲೀಸರು ಕೂಡಿ ಕರ್ತವ್ಯ ನಿರ್ವಹಿಸಿದರೆ ಸಮಾಜದಲ್ಲಿ ಉತ್ತಮ ಫಲಿತಾಂಶ ಕಾಣಬಹುದು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಆರ್.ಪಾತಣ್ಣ, ‘ಪೊಲೀಸರ ಜತೆಯಲ್ಲಿ ಗೃಹರಕ್ಷಕರೂ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜದಲ್ಲಿ ಶಿಸ್ತು ಕಾಪಾಡಲು ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.

ಪ್ರಭಾರ ಘಟಕಾಧಿಕಾರಿ ಪ್ರಕಾಶ್ ಮೂರ್ತಿ ಗೃಹರಕ್ಷಕ ದಳದ ವಾರ್ಷಿಕ ಕಾರ್ಯನಿರ್ವಹಣೆಯ ವರದಿ ಮಂಡಿಸಿದರು. ಸಹಾಯಕ ಬೋಧಕ ವೈ.ಎನ್.ಸುರೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಡಿವೈಎಸ್‌ಪಿ ತಿಪ್ಪೇಸ್ವಾಮಿ, ನಿವೃತ್ತ ಅಧೀಕ್ಷಕಿ ಎಂ.ಚಂದ್ರಕಲಾ, ಡಿಎಆರ್ ಸಹಾಯಕ ಸಬ್‍ಇನ್ಸ್‍ಪೆಕ್ಟರ್ ಸೈಯದ್ ಜಂಷೀರ್, ನಿವೃತ್ತ ಗೃಹರಕ್ಷಕರಾದ ರಂಗಸ್ವಾಮಿಗೌಡ, ಎಚ್.ಮುದ್ದಯ್ಯ, ಚಂದ್ರಪ್ಪ ಅವರನ್ನು ಸನ್ಮಾನಿಸಲಾಯಿತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು