‘ಪ್ರಧಾನಿ ಮೋದಿ ಕರ್ನಾಟಕದಲ್ಲಿ ಸ್ಪರ್ಧಿಸಿದರೆ ನಾವು ಸೋಲಿಸ್ತೇವೆ’

7
ಜನಸ್ಪಂದನ ಕಾರ್ಯಕ್ರಮದ ಬಳಿಕ ಗೃಹ ಸಚಿವ ಡಾ.ಪರಮೇಶ್ವರ ಹೇಳಿಕೆ

‘ಪ್ರಧಾನಿ ಮೋದಿ ಕರ್ನಾಟಕದಲ್ಲಿ ಸ್ಪರ್ಧಿಸಿದರೆ ನಾವು ಸೋಲಿಸ್ತೇವೆ’

Published:
Updated:
Deccan Herald

ಕೋರ: ‘ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅವರನ್ನು ನಾವು ಸೋಲಿಸುತ್ತೇವೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಕೋರ ಗ್ರಾಮದಲ್ಲಿ ಬುಧವಾರ ನಡೆದ ಜನಸ್ಪಂದನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕರ್ನಾಟಕದಲ್ಲಿ ಮೋದಿ ಅವರು ಸ್ಪರ್ಧಿಸಲು ಬಯಸಿದ್ದಾರಂತಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ, ‘ಮೋದಿ ಅವರು ಕರ್ನಾಟಕದ ಯಾವುದೇ ಮೂಲೆಯಲ್ಲಿ ಸ್ಪರ್ಧಿಸಲಿ. ಚುನಾವಣೆಯಲ್ಲಿ ನಾವು ಅವರನ್ನು ಎದುರಿಸಿ ಸೋಲಿಸುತ್ತೇವೆ’ ಎಂದರು.

’ದಸರಾ ಕಾರ್ಯಕ್ರಮ ಉದ್ಘಾಟನೆಗೆ ನಾನು ಗೈರು ಆಗಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ಅ.14,15 ಮತ್ತು 16ರಂದು ನಡೆಯುವ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ’ ಎಂದು ಹೇಳಿದರು.

’ರಾಜ್ಯದ ಜನರು ಎಚ್1ಎನ್1 ಸೋಂಕಿನಿಂದ ಬಾಧಿತರಾಬಾರದು ಎಂಬುವ ದಿಶೆಯಲ್ಲಿ ಆರೋಗ್ಯ ಇಲಾಖೆ ಅನೇಕ ಕ್ರಮಗಳನ್ನು ಕೈಗೊಂಡಿದೆ. ವಿಮಾನ ನಿಲ್ದಾಣಗಳಲ್ಲೂ ಅಗತ್ಯ ಬಿದ್ದರೆ ಸೋಂಕಿತ ಪ್ರಯಾಣಿಕರ ಪರಿಶೀಲನೆ ನಡೆಸಲಾಗುವುದು’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 3

  Happy
 • 3

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !