ಪಾವಗಡ: ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ನಾವೂ ಮೈತ್ರಿ ಮಾಡಿಕೊಂಡಿದ್ದೆವು. ಅವರ ಜೊತೆ ಮೈತ್ರಿ ಮಾಡಿಕೊಂಡಿದ್ದ ಫಲಿತಾಂಶ ಏನು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.
‘ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡರೆ ಅದಕ್ಕೆ ನಮ್ಮ ತಕರಾರಿಲ್ಲ. ಕಾಂಗ್ರೆಸ್‌ಗೆ ಇದರಿಂದ ಯಾವುದೇ ನಷ್ಟ ಇಲ್ಲ’ ಎಂದು ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
‘ಜೆಡಿಎಸ್ ಮೈತ್ರಿಯ ಫಲವನ್ನು ಈಗಾಗಲೇ ನಾವು ಅನುಭವಿಸಿದ್ದೇವೆ. ಬಿಜೆಪಿಗೆ ಏನು ಲಾಭವಾಗುತ್ತದೆ ಎಂದು ಕಾದು ನೋಡೋಣ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.