ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ | ಹೆಜ್ಜೇನು ದಾಳಿ: ಒಬ್ಬ ಸಾವು, 20 ಮಂದಿ ಅಸ್ವಸ್ಥ

Published 20 ನವೆಂಬರ್ 2023, 10:48 IST
Last Updated 20 ನವೆಂಬರ್ 2023, 10:48 IST
ಅಕ್ಷರ ಗಾತ್ರ

ಗುಬ್ಬಿ: ತಾಲ್ಲೂಕಿನ ಲಕ್ಕೇನಹಳ್ಳಿ ಗೇಟ್‌ ಬಳಿಯ ತುಳಸಿ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ಸೋಮವಾರ ಹೆಜ್ಜೇನು ದಾಳಿಗೆ ಒಬ್ಬರು ಮೃತಪಟ್ಟಿದ್ದು, 20 ಜನ ಅಸ್ವಸ್ಥಗೊಂಡಿದ್ದಾರೆ.

ಬೆಲವತ್ತ ಗ್ರಾಮದ ವೀರಭದ್ರಯ್ಯ (47) ಮೃತರು. ದೇವಸ್ಥಾನದ ಆವರಣದಲ್ಲಿ ನಾಮಕರಣ ಕಾರ್ಯಕ್ರಮ ನಡೆಯುತ್ತಿದ್ದ ಸಮಯದಲ್ಲಿ ಇದ್ದಕ್ಕಿದ್ದಂತೆ ಹೆಜ್ಜೇನು ದಾಳಿ ನಡೆಸಿವೆ. ಅಸ್ವಸ್ಥಗೊಂಡವರನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆ ಹತ್ತಿರ ಹೆಚ್ಚಿನ ಜನರು ಜಮಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT