ಶಿರಾ: ತಾಲ್ಲೂಕಿನ ಮದಲೂರು ಕೆರೆಗೆ ಹೇಮಾವತಿ ನೀರು ಬಂದ ಹಿನ್ನೆಲೆಯಲ್ಲಿ ರೈತರು 35 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಅಡಿಕೆ ಕೃಷಿ ಮಾಡುತ್ತಿರುವುದು ಮುಂದಿನ ದಿನಗಳಲ್ಲಿ ಅನ್ನದಾತರು ಆರ್ಥಿಕವಾಗಿ ಸದೃಢತೆ ಕಾಣುವ ಸಂಕೇತವಾಗಿದೆ ಎಂದು ನಂಜಾವಧೂತ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ನಡೆಯುತ್ತಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರೆ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ವೇದಿಕೆಯಲ್ಲಿ ಬುಧವಾರ ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಆಧುನಿಕ ಬೇಸಾಯ ಕ್ರಮಗಳ ಕುರಿತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ರೈತ ಬೆಳೆದಂತ ತೋಟಗಾರಿಕೆ ಬೆಳೆಗಳಿಗೆ ಸೂಕ್ತ ಬೆಲೆ ಹಾಗೂ ಮಾರುಕಟ್ಟೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ ಎಂದರು.

ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಸದ್ಬಳಕೆ, ಸೂಕ್ಷ್ಮ ಹನಿ ನೀರಾವರಿ, ಉತ್ತಮ ಬೆಳೆ ಬೆಳೆಯುವ ಕ್ರಮದ ಕುರಿತು ಡಾ. ಎಂ.ಜಿ.ಬಸನಗೌಡ ಅವರು ರೈತರಿಗೆ ಉಪನ್ಯಾಸ ನೀಡಿದರು.

ಸೂಡ ಅಧ್ಯಕ್ಷ ಪಿ.ಆರ್.ಮಂಜುನಾಥ್ ಮಾತನಾಡಿದರು.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸುಧಾಕರ್, ಕ್ಯಾದಿಗುಂಟೆ ತಿಪ್ಪೇಸ್ವಾಮಿ, ಜೇನು ಕೃಷಿ ತಜ್ಞ ಜಗದೀಶ್, ಕೃಷಿಕ ಸಮಾಜದ ಅಧ್ಯಕ್ಷ ನೆಲದಿಮ್ಮನಹಳ್ಳಿ ಮಂಜುನಾಥ್ ಹಾಗೂ ನಾದೂರು ಕೆಂಚಪ್ಪ, ಮೂಲೆಮನೆ ರಂಗನಾಥ್, ವೀರಬೊಮ್ಮನಹಳ್ಳಿ ಗಂಗಾಧರ್ ಅರುಣೋದಯ ವಿದ್ಯಾಸಂಸ್ಥೆಯ ಮಂಜುನಾಥ್, ನಾಗರಾಜು, ಸಮಾಜ ಕಲ್ಯಾಣ ಇಲಾಖೆಯ ಬಡಿಗೇರ, ಹಿಂದುಳಿದ ವರ್ಗದ ಇಲಾಖೆ ಕುಮುದ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.