ಮಂಗಳವಾರ, ಡಿಸೆಂಬರ್ 10, 2019
26 °C

ಕರಡಿ ದಾಳಿ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ತುಮಕೂರು: ಕರಡಿ ದಾಳಿಯಿಂದ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರಟಗೆರೆ ತಾಲ್ಲೂಕು ಸೊರೆನಹಳ್ಳಿ ಗ್ರಾಮದ ರೇಣುಕಮ್ಮ ಮತ್ತು ಕರೀಂಸಾಬ್ ಅವರ ಆರೋಗ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಗುರುವಾರ ವಿಚಾರಿಸಿದರು.

ಗಾಯಾಳುಗಳಿಗೆ ಚಿಕಿತ್ಸೆ ಮತ್ರು ಅರೈಕೆಗೆ ಸಂಬಂಧಿಸಿದಂತೆ ಹೆಚ್ಚಿನ ನಿಗಾವಹಿಸಲು ವೈದ್ಯರಿಗೆ ಸೂಚಿಸಿದರು.

ಅರಣ್ಯ ಇಲಾಖೆಯವತಿಯಿಂದ ತಲಾ ₹ 20 ಸಾವಿರ ಪರಿಹಾರ ವಿತರಿಸಿದರು. ಅಲ್ಲದೇ ವೈಯಕ್ತಿಕವಾಗಿ ₹ 20 ಸಾವಿರ ನೀಡಿದರು.

ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್, ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಆರ್. ರಾಮಕೃಷ್ಣ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು