ಮಂಗಳವಾರ, ಅಕ್ಟೋಬರ್ 27, 2020
28 °C

ಹೊಸಕೆರೆ ಸಂತೆ: ಇಲ್ಲ ಕೊರೊನಾ ಚಿಂತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಗಲವಾಡಿ: ಹೋಬಳಿಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದರೂ, ಹೊಸಕೆರೆ ಸಂತೆಯಲ್ಲಿ ಸಾವಿರಾರು ಕುರಿ, ಮೇಕೆ ಮಾರಾಟಗಾರರು ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸದೆ ವ್ಯವಹರಿಸುತ್ತಿದ್ದಾರೆ.

ಕೆಲ ತಿಂಗಳುಗಳಿಂದ ನಿಂತು ಹೋಗಿದ್ದ ಸಂತೆಯು ನಾಲ್ಕು ವಾರಗಳ ಹಿಂದೆ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿಯೇ ನಡೆಯುತ್ತಿದೆ. ಸಾವಿರಾರು ಜನರು ಮಾಸ್ಕ್‌ ಧರಿಸದೆ, ಅಂತರ ಕಾಪಾಡಿಕೊಳ್ಳದೆ ವ್ಯವಹರಿಸುತ್ತಿದ್ದಾರೆ.

ಈ ಹಿಂದೆಯೇ ಡಂಗುರ ಹೊಡೆಸಿ ಸಂತೆ ನಿಲ್ಲಿಸುವಂತೆ ಸೂಚಿಸಿದ್ದೆವು. ಆದರೆ ಸಾರ್ವಜನಿಕರು ಸ್ವ ಇಚ್ಛೆಯಿಂದ ಸಂತೆ ನಡೆಸುತ್ತಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಂತೆಯನ್ನು ನಿಲ್ಲಿಸಬೇಕು ಅಥವಾ ಕೋವಿಡ್‌ ಮಾರ್ಗಸೂಚಿ ಪಾಲಿಸದವರಿಗೆ ದಂಡ ವಿಧಿಸಬೇಕು ಎಂದು ಆರೋಗ್ಯಕೇಂದ್ರದ ವೈದ್ಯಾಧಿಕಾರಿ ಮಾಲತೇಶ್‌ ಎನ್‌. ಗಟ್ಟಿಮನಿ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.