ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ವಸತಿ ನಿಲಯದಲ್ಲಿ 120ಕ್ಕೂ ಅಧಿಕ ವಿದ್ಯಾರ್ಥಿಗಳು ವಾಸವಿದ್ದಾರೆ. ಮುಂಚಿತವಾಗಿಯೇ ಈ ನಿಲಯದಲ್ಲಿ ಇರುವ ಸಮಸ್ಯೆ ಕುರಿತು ಮನವಿ ಸಲ್ಲಿಸಲಾಗಿತ್ತು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಈ ವಿದ್ಯಾರ್ಥಿನಿಲಯಕ್ಕೆ ಪ್ರತಿ ವಿದ್ಯಾರ್ಥಿಯೂ ವರ್ಷಕ್ಕೆ ₹16 ಸಾವಿರ ಪಾವತಿಸುತ್ತಿದ್ದಾರೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಮೂಲ ಸೌಕರ್ಯ ಕಲ್ಪಿಸುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇಲ್ಲಿ ಸ್ನಾನಕ್ಕೆ ಹಾಗೂ ಶೌಚಾಲಯಕ್ಕೆ ಬಳಸುವ ನೀರನ್ನು ಅಡುಗೆಗೆ ಬಳಸಲಾಗುತ್ತಿದೆ. ಈ ಹಿಂದೆ ಇದ್ದ ಕೆಲವೊಂದು ಊಟದ ಸೌಲಭ್ಯಗಳನ್ನು ಕಡಿತಗೊಳಿಸಿದ್ದಾರೆ.
ಶೌಚಾಲಯದ ಅವ್ಯವಸ್ಥೆಯಿಂದ ಕೂಡಿದೆ. ಕೊಳಾಯಿಗಳು ಹಾಳಾಗಿವೆ. ಸೋಲಾರ್ ಸರಿಯಿಲ್ಲ. ನೀರಿನ ಕೊಳದಲ್ಲಿ ಕ್ರಿಮಿಕೀಟಗಳು ಬಿದ್ದು ನೀರು ಮಲಿನಗೊಳ್ಳುತ್ತಿದೆ ಎಂದು ಆರೋಪಿಸಿದರು.

ಈ ವಿದ್ಯಾರ್ಥಿನಿಲಯದ ಆವರಣದಲ್ಲಿ ಸ್ಥಳೀಯ ಪುಂಡ ಪೋಕರಿಗಳು ಮಾದಕ ವಸ್ತುಗಳನ್ನು ಬಳಸಿ ಬಿಸಾಡಿದ್ದಾರೆ. ಇದನ್ನು ಕುಲಸಚಿವರ ಗಮನಕ್ಕೆ ತಂದರು ಕ್ರಮವನ್ನು ಕೈಗೊಂಡಿಲ್ಲ. ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ನೀಡಿಲ್ಲ. ಅಡುಗೆ ಸಿಬ್ಬಂದಿಗೆ ಅಗತ್ಯವಾದ ಸಾಮಾಗ್ರಿಗಳನ್ನು ನೀಡುತ್ತಿಲ್ಲ. ಈ ವರ್ಷದಲ್ಲಿ ₹14 ಸಾವಿರ ಇದ್ದ ಶುಲ್ಕವನ್ನು ₹16 ಸಾವಿರಕ್ಕೆ ಹೆಚ್ಚಿಸಿದ್ದರೂ ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.