ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶ್ರಯ ಮನೆ: ಮತ್ತೆ ಅವಕಾಶಕ್ಕೆ ಮನವಿ

Last Updated 19 ಜೂನ್ 2021, 4:26 IST
ಅಕ್ಷರ ಗಾತ್ರ

ತುಮಕೂರು: ಆಶ್ರಯ ವಸತಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ತುಮಕೂರು ನಗರದಲ್ಲಿ ಮತ್ತೊಮ್ಮೆ ಅವಕಾಶ ನೀಡುವಂತೆ ವಸತಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು.

ನಗರ ಆಶ್ರಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ನಗರದಲ್ಲಿ ಆಶ್ರಯ ಮನೆ ಯೋಜನೆಯಡಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಸಮಯದಲ್ಲಿ 22 ಸಾವಿರಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ 4 ಸಾವಿರ ಅರ್ಜಿಗಳು ಮಾತ್ರ ಅರ್ಹವಾಗಿವೆ’ ಎಂದರು.

ಮತ್ತೊಂದೆಡೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ನಮಗೂ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಿ ಎಂದು ನೂರಾರು ಸಾರ್ವಜನಿಕರು ನನ್ನ ಬಳಿ ಬಂದು ಅಳಲು ತೋಡಿಕೊಂಡಿದ್ದಾರೆ. ಹಾಗಾಗಿ ಸಭೆಯ ನಿರ್ಣಯದಂತೆ ಮತ್ತೊಮ್ಮೆ ಆಶ್ರಯ ಮನೆ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವಂತೆ ವಸತಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ನಗರದಲ್ಲಿ ಆಶ್ರಯ ಯೋಜನೆಯಲ್ಲಿ ನಿವೇಶನ ಹಂಚಿಕೆ ಮಾಡಲು ಸಾಧ್ಯವಿಲ್ಲ. ಸರ್ಕಾರಿ ಜಮೀನುಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದು, ಜಿ+2 ಮಾದರಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಈಗಾಗಲೇ 4 ಕಡೆ ಸರ್ಕಾರಿ ಜಮೀನು ಗುರುತಿಸಲಾಗಿದ್ದು, ಆ ಜಮೀನುಗಳಿಗೆ ಜಿಪಿಎಸ್ ಕೋ-ಆರ್ಡಿನೇಟರ್ ಸರ್ವೆ ನಡೆಸುವಂತೆ ನಿರ್ದೇಶನ ನೀಡಿದರು.

ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಕೃಷ್ಣಪ್ಪ, ಆಯುಕ್ತರಾದ ರೇಣುಕಾ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ರಂಗಸ್ವಾಮಿ, ತಹಶೀಲ್ದಾರ್ ಮೋಹನ್, ಸರೋಜಗೌಡ, ಎನ್‌.ಡಿ.ವಿಜಯ್ ಪ್ರಕಾಶ್, ಸಿದ್ದಗಂಗಯ್ಯ, ಕೊಳಚೆ ನಿರ್ಮೂಲನಾ ಮಮಡಳಿ ಎಂಜಿನಿಯರ್ ಲೋಕೇಶ್ವರಪ್ಪ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT