ಸೋಮವಾರ, ಫೆಬ್ರವರಿ 24, 2020
19 °C

7ರಿಂದ ಹೊಯ್ಸಳ ಸಂಘದ ದಶಮಾನೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲಾ ಹೊಯ್ಸಳ ಕರ್ನಾಟಕ ಸಂಘ ಸ್ಥಾಪನೆಯಾಗಿ 10 ವರ್ಷ ಸಂದಿದ್ದು, ಸಂಘದ ದಶಮಾನೋತ್ಸವ ಕಾರ್ಯಕ್ರಮ ಹಾಗೂ ಹೊಯ್ಸಳರ ಸಮಾವೇಶವನ್ನು ಇದೇ 7 ಮತ್ತು 8ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಚ್.‌ಎಸ್.ರಾಘವೇಂದ್ರ ತಿಳಿಸಿದ್ದಾರೆ.

ನಗರದ ಬಿ.ಎಚ್.ರಸ್ತೆಯಲ್ಲಿರುವ ಶೃಂಗೇರಿ ಶಂಕರಮಠದ ಅಭಿನವ ವಿದ್ಯಾತೀರ್ಥ ಪ್ರವಚನ ಮಂದಿರದಲ್ಲಿಕಾರ್ಯಕ್ರಮ ನಡೆಯಲಿದ್ದು, 7 ರಂದು ದಶಮಾನೋತ್ಸವದ ಅಂಗವಾಗಿ ಬೆಳಿಗ್ಗೆ 6ರಿಂದ 11.30ರವರೆಗೆ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ.

ಸಭಾ ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಭಾಗವಹಿಸುವರು. ಕಾಲೇಜು ಶಿಕ್ಷಣ ಇಲಾಖೆಯ ವಿಶ್ರಾಂತ ಸಹ ನಿರ್ದೇಶಕ ಟಿ.ಎನ್.ಪ್ರಭಾಕರ್, ಜಿಲ್ಲಾ ಹೊಯ್ಸಳ ಸಂಘದ ಉಪಾಧ್ಯಕ್ಷ ಎಚ್.ರಾಮಮೂರ್ತಿ ಭಾಗವಹಿಸುವರು.

ಶಮಾನೋತ್ಸವ ಸಂದರ್ಭದಲ್ಲಿ ಹೊರತರಲಿರುವ ಸ್ಮರಣ ಸಂಚಿಕೆಯನ್ನು ನಟಿ ಸುಧಾ ಬೆಳವಾಡಿ ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರು ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಹೆಚ್. ಬಿ. ಚಂದ್ರಶೇಖರಯ್ಯ, ಹಾಸನ ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಡಿ.ಎನ್.ವೆಂಕಟೇಶಮೂರ್ತಿ, ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯ ಎಚ್.ಸಿ.ನಾಗರತ್ನ ರಾಮಮೂರ್ತಿ ಭಾಗವಹಿಸಲಿದ್ದಾರೆ ಎಂದು ಕೆ.ಹಿರಿಯಣ್ಣ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು