ಹುಳಿಯಾರು: ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಗುರುವಾರ ವಾರದ ಸಂತೆ ಆರಂಭಗೊಂಡು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದ ಗಾಂಧಿಪೇಟೆ ಮುಖ್ಯರಸ್ತೆಯಲ್ಲಿ ಸಂತೆ ಬಹು ವರ್ಷಗಳಿಂದ ನಡೆಯುತ್ತಿದ್ದು ಸಾರ್ವಜನಿಕರಿಗೆ ತೊಂದರೆಯಾಗಿತ್ತು.

ಎಪಿಎಂಸಿ ಆವರಣ ವಿಶಾಲ ಜಾಗದಲ್ಲಿ ತರಕಾರಿ, ಈರುಳ್ಳಿ, ದಿನಸಿ ಪದಾರ್ಥ ಸೇರಿದಂತೆ ಸೊಪ್ಪು, ಎಲೆ ಮಾರಾಟಕ್ಕೆ ಪ್ರತ್ಯೇಕ ಸಾಲುಗಳನ್ನು ವ್ಯವಸ್ಥೆ ಮಾಡಲಾಗಿದೆ.

ವ್ಯಾಪಾರಿಗಳು ಬೆಳಗ್ಗೆಯಿಂದಲೇ ಸ್ಥಳ ಗುರುತಿಸಿಕೊಂಡು ಅಂಗಡಿ ತೆರೆದಿದ್ದರು. ಬೆಳಗ್ಗೆ 6 ಗಂಟೆಗೆ ತಹಶೀಲ್ದಾರ್ ಎಂ.ಮಮತಾ ಸಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೊದಲು ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿ, ಗುರುವಾರ ಯಾವುದೇ ವ್ಯಾಪಾರಿಗಳು ಎಲ್ಲೆಂದರಲ್ಲಿ ತರಕಾರಿ ವ್ಯಾಪಾರ ಮಾಡುವಂತಿಲ್ಲ. ಸಂತೆ ಸ್ಥಳ ಗುರುತಿಸಿರುವ ಎಪಿಎಂಸಿ ಆವರಣದಲ್ಲಿಯೇ ನಡೆಸಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಿದರು. ಆದೇಶ ಉಲ್ಲಂಘಿಸಿದರೆ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಪಿಎಂಸಿಯಲ್ಲಿ ಸ್ಥಳಾವಕಾಶ ಕಲ್ಪಿಸಿದ್ದು ಮೂಲ ಸೌಕರ್ಯ ಒದಗಿಸಲಾಗುವುದು. ಅಲ್ಲದೆ ಮುಂದಿನ 2 ವಾರ ಸುಂಕ ವಸೂಲಿ ಮಾಡುವುದಿಲ್ಲ. ಮುಂದಿನ ದಿನಗಳಲ್ಲಿ ಪ್ಲಾಟ್ಪಾರಂ ನಿರ್ಮಿಸಿ ಅನುಕೂಲ ಮಾಡಲಾಗುತ್ತದೆ. ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕೂಡ ಮಾಡಲಾಗುವುದು ಎಂದು ಎಪಿಎಂಸಿ ಕಾರ್ಯದರ್ಶಿ ಎಂ.ನಾಗೇಂದ್ರ ಕುಮಾರ್ ತಿಳಿಸಿದರು.

ಹೋರಾಟಕ್ಕೆ ಸಂದ ಜಯ: ಪಟ್ಟಣ ಪಂಚಾಯಿತಿ ಕಚೇರಿ ಎದುರು ಪಟ್ಟಣದಲ್ಲಿ ಸಂತೆ ಮೈದಾನ, ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಮೂಲ ಸೌಕರ್ಯಕ್ಕೆ ಒತ್ತಾಯಿಸಿ 82 ದಿನ ರೈತಸಂಘದ ಹೊಸಹಳ್ಳಿ ಚಂದ್ರಣ್ಣ ನೇತೃತ್ವದಲ್ಲಿ ಸತ್ಯಾಗ್ರಹ ನಡೆಸಲಾಗಿತ್ತು. ರೈತಸಂಘ ಸತ್ಯಾಗ್ರಹ ನಡೆಸಲು ಹಾಕಿದ್ದ ಬಿಡಾರಕ್ಕೆ ಬೆಂಕಿ ಇಡಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-17-1914346836

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.