ಹುಳಿಯಾರು: ಹೋಬಳಿಯ ಕೋರಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಗೀಹಳ್ಳಿ ಕಾಲೊನಿಯ 80 ವರ್ಷದ ವೃದ್ಧೆಗಾಗಿ ಶಾಸಕ ಸಿ.ಬಿ.ಸುರೇಶ್ಬಾಬು ಮನೆ ನಿರ್ಮಿಸಿದ್ದು, ಬುಧವಾರ ಹಸ್ತಾಂತರಿಸಿದರು.

ಶಾಸಕ ಸುರೇಶ್ ಬಾಬು ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ‘ವಾಸಕ್ಕೆ ಸೂರಿಲ್ಲ ನನಗೊಂದು ಮನೆ ನಿರ್ಮಿಸಿಕೊಡಿ’ ಎಂದು ವೃದ್ಧೆ ಮನವಿ ಮಾಡಿದ್ದರು. ಹಲವು ವರ್ಷಗಳಿಂದ ಸರ್ಕಾರದಿಂದ ಬಡವರಿಗೆ ಮನೆಗಳ ವಿತರಣೆ ಆಗದ ಕಾರಣ ವೃದ್ಧೆಯ ಮನವಿ ಪರಿಗಣಿಸಿ ಕೇವಲ ಮೂರು ದಿನದೊಳಗೆ ಶಾಸಕರ ಸ್ವಂತ ಖರ್ಚಿನಲ್ಲಿ ಶೀಟ್ ಮನೆ ನಿರ್ಮಿಸಿ ಕೊಟ್ಟಿದ್ದಾರೆ.

ಮನೆ ಹಸ್ತಾಂತರ ವೇಳೆ ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಹರೀಶ್, ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-17-1482799844

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.