ಹುಳಿಯಾರು: ಹೋಬಳಿ ವ್ಯಾಪ್ತಿಯಲ್ಲಿ ಪಡಿತರ ವಿತರಣಾ ವ್ಯವಸ್ಥೆಗೆ ಸರ್ವರ್ ಸಮಸ್ಯೆ ಎದುರಾಗಿದ್ದು, ಪಡಿತರ ಪಡೆಯಲು ಫಲಾನುಭವಿಗಳು ಹಗಲು ರಾತ್ರಿ ಎನ್ನದೆ ಪಡಿತರ ವಿತರಣಾ ಕೇಂದ್ರಗಳ ಮುಂದೆ ಜಾಗರಣೆ ಮಾಡುವ ಅನಿವಾರ್ಯತೆ ಎದುರಾಗಿದೆ.

ರೈತರು ಮತ್ತು ಕೂಲಿ ಕಾರ್ಮಿಕರು ತಮ್ಮ ಕೆಲಸ ಕಾರ್ಯ ಬಿಟ್ಟು ಬೆಳಗಿನ ಜಾವದಿಂದ ರಾತ್ರಿ 10ರ ವರೆಗೆ ಕಾಯುವಂತಾಗಿದೆ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣ ಹಾಗೂ ಗ್ರಾಮೀಣ ಭಾಗದ ಪಡಿತರ ಅಂಗಡಿಗಳಲ್ಲಿ ಕಳೆದ ಕೆಲವು ದಿನಗಳಿಂದ ಸರ್ವರ್ ಸಮಸ್ಯೆ ತೀವ್ರವಾಗಿದೆ. ಬೆರಳಚ್ಚು ಹಾಗೂ ಇ-ಕೆವೈಸಿ ಪ್ರಕ್ರಿಯೆ ನಡೆಯದೆ ಪಡಿತರ ವಿತರಣೆ ಆಗಾಗ ಸ್ಥಗಿತಗೊಳ್ಳುತ್ತಿದೆ. ದೂರದ ಗ್ರಾಮಗಳಿಂದ ವಾಹನದ ಖರ್ಚು ಮಾಡಿಕೊಂಡು ಬರುವ ಬಡ ಕುಟುಂಬಗಳು ದಿನಪೂರ್ತಿ ಕಾಯ್ದರೂ, ಪಡಿತರ ಸಿಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

ಕೆಲವರು ಕೂಲಿ ಕೆಲಸ ಬಿಟ್ಟು ಪಡಿತರಕ್ಕಾಗಿ ಬರುತ್ತಿದ್ದು, ದಿನದ ಆದಾಯಕ್ಕೂ ಕತ್ತರಿ ಬಿದ್ದಿದೆ. ವೃದ್ಧರು, ಮಹಿಳೆಯರು ಹಾಗೂ ಅಂಗವಿಕಲರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ಪಡಿತರ ಅಂಗಡಿ ಮಾಲೀಕರಿಂದ ಬರುವ ‘ಸರ್ವರ್ ಇಲ್ಲ’ ಎಂಬ ಉತ್ತರ ಕೇಳಿ ಜನರು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಪಡಿತರ ಅಂಗಡಿ ಮಾಲೀಕರು ಕೂಡ ಸರ್ವರ್ ಸಮಸ್ಯೆಯಿಂದ ಸಂಕಷ್ಟಕ್ಕೀಡಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-18-1846927582

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.