ಹುಳಿಯಾರು: ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ರೋಗಗಳು ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿವಿಧೆಡೆ ವಿಶ್ವ ತಂಬಾಕು ರಹಿತ ದಿನಾಚರಣೆ ಶನಿವಾರ ನಡೆಯಿತು.

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ತಂಬಾಕು ಮುಕ್ತ ಜೀವನದ ಕುರಿತು ಜಾಗೃತಿ ಮೂಡಿಸಲಾಯಿತು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿ.ವಿ. ವೆಂಕಟರಾಮಯ್ಯ ಮಾತನಾಡಿ, ತಂಬಾಕು ಉತ್ಪನ್ನಗಳ ಸತತ ಬಳಕೆಯಿಂದ ಬಾಯಿ ಶುಚಿತ್ವ ಹಾಳಾಗುವುದಲ್ಲದೆ, ಕ್ಯಾನ್ಸರ್ನಂತಹ ಮಾರಕ ರೋಗಗಳು ಬರುತ್ತವೆ. ಇದು ಹೃದಯ ಸಂಬಂಧಿ ಕಾಯಿಲೆ, ರಕ್ತದೊತ್ತಡ ಹೆಚ್ಚಳದಂತಹ ಗಂಭೀರ ಸ್ಥಿತಿಗಳಿಗೆ ಕಾರಣವಾಗುತ್ತದೆ. ಧೂಮಪಾನದಿಂದ ಕೈ ಬೆರಳುಗಳು ಬಣ್ಣಗೆಡುತ್ತವೆ. ಹೊಟ್ಟೆಯಲ್ಲಿ ಅಲ್ಸರ್ ಹಾಗೂ ಕಾಲಿನಲ್ಲಿ ಗ್ಯಾಂಗ್ರೀನ್ ಉಂಟಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಪುರುಷರಲ್ಲಿ ವೀರ್ಯಾಣು ಉತ್ಪತ್ತಿಯನ್ನು ಕಡಿಮೆ ಮಾಡಿ, ಪುರುಷತ್ವ ಕುಂಠಿತಗೊಳ್ಳಲು ಕಾರಣವಾಗುತ್ತದೆ. ಬೀಡಿ, ಸಿಗರೇಟ್ ಸೇದುವವರ ಪಕ್ಕದಲ್ಲಿ ಇರುವವರಿಗೂ ಆ ಹೊಗೆಯಿಂದಾಗಿ ಕ್ಷಯ ಬರುವ ಸಾಧ್ಯತೆಗಳು ಹೆಚ್ಚಿರುತ್ತವೆ. ಪ್ರತಿಯೊಬ್ಬರೂ ಇವುಗಳಿಂದ ದೂರ ಇರಬೇಕು. ವಿಶೇಷ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು.

ಜಾಗೃತಿ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಕೃಷ್ಣ, ಆಯುಷ್ ವೈದ್ಯರಾದ ಚಂದನ, ಆರೋಗ್ಯ ನಿರೀಕ್ಷಣಾಧಿಕಾರಿ ರೇಣುಕ ರಾಜು ಬಿ.ಸಿ, ಸಮುದಾಯ ಆರೋಗ್ಯ ಅಧಿಕಾರಿಗಳಾದ ವಸಂತ, ಪಾರ್ವತಮ್ಮ, ಮೆಹಬೂಬ್, ಶಹತಾಜ್ ಸೇರಿದಂತೆ ಆರೋಗ್ಯ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-17-41187671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.