ಹುಳಿಯಾರು: ಹೋಬಳಿಯ ಕೆಂಕೆರೆ ಗ್ರಾಮದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 150 ಎ ನಲ್ಲಿ ಗ್ರಾಮದ ಬಸ್ ನಿಲ್ದಾಣದಲ್ಲಿ ವಾಹನಗಳ ವೇಗಮಿತಿ ತಡೆಯಲು ಹಾಕಿರುವ ರಸ್ತೆ ಉಬ್ಬು ಅವೈಜ್ಞಾನಿಕವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಗ್ರಾಮದ ಹೃದಯ ಭಾಗವಾಗಿರುವ ಬಸ್ ನಿಲ್ದಾಣ ಅನೇಕ ಸಂಪರ್ಕ ರಸ್ತೆಗಳನ್ನು ಹೊಂದಿದೆ. ಅಲ್ಲದೆ ಗ್ರಾಮದ ಮುಖ್ಯರಸ್ತೆ ಹೆದ್ದಾರಿಗೆ ಸಂಪರ್ಕ ಹೊಂದಿರುವುದರಿಂದ ಜನರ ಸಂಚಾರ ಹೆಚ್ಚಾಗಿದೆ. ಮುಖ್ಯರಸ್ತೆಯಿಂದ ಬಂದು ರಸ್ತೆಗೆ ತಿರುಗುವುದರಿಂದ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಚಾಲಕರಿಗೆ ದಾರಿ ತಪ್ಪಿಸುತ್ತಿದೆ. ಅನಾಹುತ ತಪ್ಪಿಸಲು ಅವೈಜ್ಞಾನಿಕ ರಸ್ತೆ ಉಬ್ಬು ನಿರ್ಮಿಸಲಾಗಿತ್ತು. ನಂತರ ಏರಿಳಿತವಿರುವ ರಸ್ತೆ ಉಬ್ಬು ನಿರ್ಮಿಸಿ ಅವಘಡಗಳನ್ನು ತಪ್ಪಿಸಲು ಮುಂದಾಗಿದ್ದರು. ಆದರೆ ರಾತ್ರಿ ವೇಳೆ ರಸ್ತೆ ಉಬ್ಬು ಕಾಣಿಸದ ಪರಿಣಾಮ ಅಪಘಾತಗಳು ಹೆಚ್ಚುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-17-1772032919

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.