ಹುಳಿಯಾರು: ಪಟ್ಟಣದ ಕನಕ ವೃತ್ತದ ಬಳಿ ಗುರುವಾರ ಕೆಎಸ್ಆರ್ಟಿಸಿ ಬಸ್ನಲ್ಲಿ ಡೀಸೆಲ್ ಪೈಪ್ ತುಂಡಾಗಿ ಸೋರಿಕೆಯಾದ ಪರಿಣಾಮ ಎಂಜಿನ್ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹುಳಿಯಾರಿನಿಂದ ಅರಸೀಕೆರೆಗೆ ಹೊರಟಿದ್ದ ಬಸ್ ಪ್ರವಾಸಿ ಮಂದಿರದ ಬಳಿ ಚಲಿಸುತ್ತಿದ್ದಾಗ ಎಂಜಿನ್ ಭಾಗದಲ್ಲಿ ಡೀಸೆಲ್ ಸೋರಿಕೆಯಾಗಿ ಬ್ಯಾಟರಿ ಕೇಬಲ್ನಲ್ಲಿ ಶಾರ್ಟ್ಸರ್ಕೀಟ್ ಆಗಿದೆ. ತಕ್ಷಣ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಒಳಗೆ ದಟ್ಟವಾದ ಹೊಗೆ ತುಂಬಿಕೊಂಡಿತ್ತು. ಇದನ್ನು ಗಮನಿಸಿದ ಅಕ್ಕಪಕ್ಕದ ಅಂಗಡಿಯವರು ಮತ್ತು ಸಾರ್ವಜನಿಕರು ತಕ್ಷಣ ಚಾಲಕನ ಗಮನಕ್ಕೆ ತಂದಿದ್ದಾರೆ. ಬಸ್ ಹಿಂಭಾಗದ ಬಾಗಿಲು ತೆರೆದಿದ್ದರಿಂದ ಪ್ರಯಾಣಿಕರು ತಕ್ಷಣವೇ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಕ್ಕದಲ್ಲೇ ಬೇಕರಿ, ಹಣ್ಣಿನ ಅಂಗಡಿ ಮತ್ತು ಮನೆಗಳಿದ್ದು, ಸ್ಥಳೀಯರು ಮರಳು ಮತ್ತು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ನಂತರ ಅಗ್ನಿಶಾಮಕ ದಳದವರು ಸಂಪೂರ್ಣ ಬೆಂಕಿ ಆರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-17-1402707279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.