ಹುಳಿಯಾರು: ಪಟ್ಟಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ ಗುರುವಾರ ಗಾಂಧಿಪೇಟೆ ರಸ್ತೆಯಲ್ಲಿ ನಡೆಯುತ್ತಿದ್ದ ತರಕಾರಿ ಸಂತೆಯನ್ನು ಏ. 23ರಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಸಮಿತಿ ಕಾರ್ಯದರ್ಶಿ ಎಂ.ನಾಗೇಂದ್ರಕುಮಾರ್ ತಿಳಿಸಿದರು.

ಗುರುವಾರ ಸಂತೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳಾಂತರದ ಕುರಿತು ಸಾರ್ವಜನಿಕರು ಹಾಗೂ ರೈತರು ಸಹಕರಿಸಬೇಕೆಂದು ಮನವಿ ಮಾಡಿದರು.

ಪ್ರಥಮ ಹಂತದಲ್ಲಿ 32 ಜನ ತರಕಾರಿ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಅವರಿಗೆ ಎಪಿಎಂಸಿ ಆವರಣದಲ್ಲಿ ಬಾಕ್ಸ್ ಶೈಲಿಯಲ್ಲಿ ಜಾಗ ಗುರುತು ಮಾಡಿ ಅವಕಾಶ ಕಲ್ಪಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಸ್ಥರು ಬಂದಲ್ಲಿ ಮುಂದಿನ ದಿನಗಳಲ್ಲಿ ಅವರಿಗೂ ವ್ಯವಸ್ಥೆ ಮಾಡಲಾಗುವುದು ಎಂದರು.

ಸಂತೆ ವ್ಯಾಪಾರಸ್ಥರಿಗೆ ಪ್ರತಿ ತಿಂಗಳು ನಿಗದಿತ ನೆಲ ಬಾಡಿಗೆ ಹಾಗೂ ಶೇಕಡಾ 0.60 ಪೈಸೆಯಂತೆ ಬಳಕೆದಾರರ ಶುಲ್ಕವನ್ನು ಕಡ್ಡಾಯವಾಗಿ ವಿಧಿಸಲಾಗುತ್ತದೆ ಎಂದರು.

ಸದ್ಯಕ್ಕೆ ಕೇವಲ ತರಕಾರಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತರಕಾರಿ ಹೊರತುಪಡಿಸಿ ಇತರ ಯಾವುದೇ ಕೃಷಿಯೇತರ ವ್ಯಾಪಾರಸ್ಥರಿಗೆ ಪ್ರಾಂಗಣದ ಒಳಭಾಗದಲ್ಲಿ ವ್ಯಾಪಾರ ಮಾಡಲು ಕಡ್ಡಾಯವಾಗಿ ನಿಷೇಧ ಹೇರಲಾಗಿದೆ ಎಂದು ತಿಳಿಸಿದರು.

ಮಾರುಕಟ್ಟೆಗೆ ಬರುವ ರೈತರು ಮತ್ತು ಸಾರ್ವಜನಿಕರಿಗಾಗಿ ಈಗಾಗಲೇ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಪ್ಲಾಟ್ಫಾರ್ಮ್ ಸೇರಿದಂತೆ ಸೌಲಭ್ಯ ಒದಗಿಸಲಾಗುವುದು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-17-80929574

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.