ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೊಲೀಸ್ ಠಾಣೆ ಕಟ್ಟಡಕ್ಕಾಗಿ ಉಪವಾಸ ಸತ್ಯಾಗ್ರಹ

Published 7 ಮಾರ್ಚ್ 2024, 5:14 IST
Last Updated 7 ಮಾರ್ಚ್ 2024, 5:14 IST
ಅಕ್ಷರ ಗಾತ್ರ

ತುಮಕೂರು: ಜಯನಗರ ಪೊಲೀಸ್‌ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಕೇಂದ್ರದ ಪದಾಧಿಕಾರಿಗಳು ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.

ಸಪ್ತಗಿರಿ ಬಡಾವಣೆ ಬಳಿ ಠಾಣೆ ನಿರ್ಮಾಣಕ್ಕೆ ಮಂಜೂರಾದ ನಿವೇಶನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.

‘2015ರಲ್ಲಿ ಜಯನಗರ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡದಲ್ಲಿ ಜಯನಗರ ಠಾಣೆಯನ್ನು ತಾತ್ಕಾಲಿಕವಾಗಿ ಆರಂಭಿಸಲಾಗಿತ್ತು. ಇದುವರೆಗೂ ಸ್ವಂತ ಕಟ್ಟಡ ಒದಗಿಸಿಲ್ಲ. ಈಗಿರುವ ಕಟ್ಟಡ ಶಿಥಿಲಗೊಂಡಿದ್ದು, ಸಣ್ಣ ಮಳೆ ಬಂದರೂ ಸೋರುತ್ತಿದೆ. ಸರ್ಕಾರ ಅಗತ್ಯ ಅನುದಾನ ನೀಡಬೇಕು’ ಎಂದು ಹೋರಾಟ ಕೇಂದ್ರದ ರಾಜ್ಯ ಅಧ್ಯಕ್ಷ ಸಾಧಿಕ್‌ ಪಾಷ ಒತ್ತಾಯಿಸಿದರು.

ನಿವೇಶನ ಮಂಜೂರಾಗಿ 8 ವರ್ಷ ಕಳೆದಿದ್ದರೂ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿಲ್ಲ. ಪೊಲೀಸ್‌ ಸಿಬ್ಬಂದಿ ಶಿಥಿಲಗೊಂಡ ಕಟ್ಟಡದಲ್ಲಿ ಜೀವ ಕೈಯಲ್ಲಿ ಹಿಡಿದು ಕೆಲಸ ಮಾಡುತ್ತಿದ್ದಾರೆ. ಕನಿಷ್ಠ ₹50 ಲಕ್ಷ ಅನುದಾನ ಬಿಡುಗಡೆ ಮಾಡಿ, ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಮಾನವ ಹಕ್ಕುಗಳ ಹೋರಾಟ ಕೇಂದ್ರದ ಪದಾಧಿಕಾರಿಗಳಾದ ಕೃಷ್ಣಮೂರ್ತಿ, ಹನುಮಂತರಾಜು, ತಬರೇಜ್, ಮೆಹಬೂಬ್, ವಾಸಿಮ್, ಮೋಹನ್, ಜಾಕಿರ್, ಅಜ್ಗರ್ ಆಲಿ, ಅಯಾಜ್, ಇರ್ಫಾನ್ ಅಹ್ಮದ್‌, ಸೈಯದ್ ಇಸ್ತಾಕ್, ಖಾದರ್‌ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT