ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್: ಪತ್ನಿಯ ಕತ್ತು ಕತ್ತರಿಸಿ, ಚರ್ಮ ಸುಲಿದ ಪತಿ

Published 28 ಮೇ 2024, 4:01 IST
Last Updated 28 ಮೇ 2024, 4:01 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗದಲ್ಲಿ ಮಂಗಳವಾರ ವ್ಯಕ್ತಿಯೊಬ್ಬರು ತನ್ನ ಪತ್ನಿಯ ಕತ್ತು ಕತ್ತರಿಸಿ, ಚರ್ಮ ಸುಲಿದು ವಿಕೃತಿ ಮೆರೆದಿದ್ದಾರೆ.

ಪುಷ್ಪಾ (35) ಕೊಲೆಯಾದವರು, ಶಿವರಾಮ ಕೊಲೆ ಮಾಡಿದ ಆರೋಪಿ. ಇವರಿಗೆ ನಾಲ್ಕು ವರ್ಷದ ಗಂಡು ಮಗು ಇದೆ.

ಸೋಮವಾರ ಸಂಜೆಯಿಂದಲೇ ಇಬ್ಬರ ಮಧ್ಯೆ ಜಗಳವಾಗುತ್ತಿತ್ತು. ಮಂಗಳವಾರ ಬೆಳಗ್ಗೆ ಮನೆ ಬಾಗಿಲಲ್ಲಿ ರಕ್ತದ ಕಲೆಗಳನ್ನು ಕಂಡ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ ಹತ್ಯೆಯಾಗಿರುವುದು ಗೊತ್ತಾಗಿದೆ. ಶಿವರಾಮರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT