ತುಮಕೂರು: ಖಾತೆ ಬದಲಾವಣೆಗೆ ಬಗ್ಗೆ ಅಸಮಾಧಾನಗೊಂಡಿರುವ ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ಕರೆಯಿಸಿ ಮಾತನಾಡುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ಇಲ್ಲಿ ತಿಳಿಸಿದರು.
ಖಾತೆ ಬದಲಾವಣೆ ಬೆನ್ನಲ್ಲೇ ಮಾಧುಸ್ವಾಮಿ ಎಲ್ಲ ಕಾರ್ಯಕ್ರಮಗಳಿಂದ ದೂರವಿದ್ದು ಮನೆಯಲ್ಲಿಯೇ ಉಳಿದಿದ್ದರು. ಸಿದ್ದಗಂಗಾ ಮಠಧ ಶಿವಕುಮಾರ ಸ್ವಾಮೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೂ ಹೋಗಿರಲಿಲ್ಲ. ಇದೇವೇಳೆ, ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗ ಭವನಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಸಚಿವ ಮಾಧುಸ್ವಾಮಿ ಗೈರಾಗಿದ್ದಾರೆ.
ರೈತರ ಜತೆಯಲ್ಲಿ ಇರುವ ಖಾತೆ ನನಗೆ ಬೇಕು. ಸಣ್ಣ ನೀರಾವರಿ ಖಾತೆಯನ್ನು ನಾನು ಆಸೆಪಟ್ಟಿದ್ದೆ ಎಂದು ಅವರ ಆಪ್ತರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಂದು ಹಂತದಲ್ಲಿ ಬೇಸರದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಅಸಮಾಧಾನ ಸಹ ವ್ಯಕ್ತಪಡಿಸಿದರು ಎಂದು ಸಚಿವರ ಆಪ್ತ ಮೂಲಗಳು ತಿಳಿಸುತ್ತವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.