ಸೋಮವಾರ, ಜನವರಿ 27, 2020
21 °C

ಶಾಲಿನಿ ರಜನೀಶ್ ವರ್ಗಾವಣೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ವರ್ಗಾವಣೆ ಆಗಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತೆ ಅದೇ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ! ಸೋಮವಾರ ರಾಜ್ಯ ಸರ್ಕಾರವು ಉಸ್ತುವಾರಿ ಕಾರ್ಯದರ್ಶಿಗಳನ್ನು ಹೊಸದಾಗಿ ನೇಮಿಸಿ ಆದೇಶ ಹೊರಡಿಸಿತ್ತು.

ಶಾಲಿನಿ ರಜನೀಶ್ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಕ್ ಅವರನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು. ಆದರೆ ಮಂಗಳವಾರ ಬೆಳಿಗ್ಗೆ ಶಾಲಿನಿ ಅವರನ್ನು ಅದೇ ಸ್ಥಾನದಲ್ಲಿ ಮುಂದುವರಿಸಲು ಸರ್ಕಾರ ಆದೇಶಿಸಿದೆ. ‌

ಇದು ಜಿಲ್ಲಾ ರಾಜಕಾರಣ ಮತ್ತು ಅಧಿಕಾರಿಗಳ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಶಾಲಿನಿ ರಜನೀಶ್ ಅಷ್ಟೊಂದು ಪ್ರಭಾವಿಯಾ? ಇಲ್ಲ ಅವರನ್ನು ಕೆಲಸ ಕಾರ್ಯಗಳನ್ನು ವಿರೋಧಿಸುತ್ತಿದ್ದ ರಾಜಕಾರಣಿಗಳ ಜತೆ ಅವರು ‘ಒಪ್ಪಂದ’ ಮಾಡಿಕೊಂಡರಾ ಎನ್ನುವ ಚರ್ಚೆ ಜಿಲ್ಲೆಯ ಅಧಿಕಾರಿ ವಲಯದಲ್ಲಿ ನಡೆಯುತ್ತಿದೆ.

ತುಮಕೂರು ಸ್ಮಾರ್ಟ್‌ಸಿಟಿ ಅಧ್ಯಕ್ಷೆಯೂ ಆಗಿದ್ದ ಶಾಲಿನಿ ರಜನೀಶ್ ಅವರ ಕಾರ್ಯವೈಖರಿಯ ಕುರಿತು ಸಂಸದ ಜಿ.ಎಸ್.ಬಸವರಾಜು ಆಗಾಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

ಸುದ್ದಿಗೋಷ್ಠಿಗಳಲ್ಲಿ ಅವರ ಕಾರ್ಯವೈಖರಿಯನ್ನು ಟೀಕಿಸಿದ್ದರು. ಶಾಸಕ ಜ್ಯೋತಿ ಗಣೇಶ್, ಬಿಜೆಪಿ ಹಿರಿಯ ನಾಯಕ ಸೊಗಡು ಶಿವಣ್ಣ ಸೇರಿದಂತೆ ಹಲವರು ಸ್ಮಾರ್ಟ್‌ಸಿಟಿ ಕಾಮಗಾರಿ ಸಮರ್ಪಕವಾಗಿ ಮತ್ತು ವೇಗವಾಗಿ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು