ಶುಕ್ರವಾರ, ನವೆಂಬರ್ 27, 2020
20 °C

ಬಿಜೆಪಿ ಗೆದ್ದರೆ ಅಭಿವೃದ್ಧಿಗೆ ಆದ್ಯತೆ: ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ಶಿರಾ ಕ್ಷೇತ್ರದಲ್ಲಿ ಇದುವರೆಗೂ ಆಯ್ಕೆಯಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ನಿರ್ಲಕ್ಷದಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಮರಿಚಿಕೆಯಾಗಿದೆ. ಬಿಜೆಪಿ ಶಾಸಕರು ಆಯ್ಕೆಯಾದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ ಹೇಳಿದರು.

ತಾಲ್ಲೂಕಿನ ಚನ್ನನಕುಂಟೆ ಗ್ರಾಮದಲ್ಲಿ ಮಂಗಳವಾರ ನಡೆದ ಬಿಜೆಪಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಮತ್ತು ಕೇ‌ಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಇಲ್ಲಿ ಬಿಜೆಪಿ ಶಾಸಕರಿದ್ದರೆ ಹೆಚ್ಚಿನ ಅನುದಾನ  ದೊರೆಯುತ್ತದೆ ಎಂದರು.

ನೀರಾವರಿ ಯೋಜನೆಗಳಿಂದ ವಂಚಿತವಾಗಿದ್ದು, ಅಧಿಕಾರ ಅನುಭವಿಸಿದವರಿಗೆ ಇದುವರೆಗೆ ಮದಲೂರು ಕೆರೆಗೆ ನೀರು ಹರಿಸಲು‌ ಸಾಧ್ಯವಾಗಿಲ್ಲ. ಬಿಜೆಪಿ ಸರ್ಕಾರ ಚುನಾವಣೆಯ ನಂತರ ನೀರು ಹರಿಸುತ್ತೇವೆ ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸಂಸದ ಪಿ.ಸಿ. ಮೋಹನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ. ಮಂಜುನಾಥ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು