ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಡಿ ಕಂಡರೆ ಮಾಹಿತಿ ನೀಡಿ: ಅರಣ್ಯಾಧಿಕಾರಿ ಕೆ.ಎಸ್.ಸತೀಶ್ ಚಂದ್ರ

Last Updated 22 ಜನವರಿ 2023, 5:54 IST
ಅಕ್ಷರ ಗಾತ್ರ

ಪಾವಗಡ: ಪಟ್ಟಣದ ಕೆಲವು ಬಡಾವಣೆಗಳಲ್ಲಿ ರಾತ್ರಿ ಕರಡಿ ಓಡಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ವಲಯ ಅರಣ್ಯಾಧಿಕಾರಿ ಕೆ.ಎಸ್. ಸತೀಶ್ ಚಂದ್ರ ತಿಳಿಸಿದ್ದಾರೆ.

ಪೆನುಗೊಂಡ ರಸ್ತೆಯ ಬಡಾವಣೆಗೆ ಹೊಂದಿಕೊಂಡು ಸಪೋಟ ಗಿಡ ಗಳಿದ್ದು, ಹಣ್ಣುಗಳಿಗಾಗಿ ಕರಡಿ ಬರುತ್ತಿದೆ. ಅದನ್ನು ಕಂಡ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಬೇಕು. ಅದರತ್ತ ಕಲ್ಲು ಎಸೆಯುವುದು, ಕೋಲಿನಿಂದ ಅಟ್ಟಿಸಿಕೊಂಡು ಹೋಗುವುದು, ಗಾಬರಿಗೊಳಿಸುವ ಕೆಲಸ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ಈಗಾಗಲೇ ಕರಡಿ ಓಡಾಡುತ್ತಿರುವ ಪಥದಲ್ಲಿ ಬೋನ್‌ಗಳನ್ನು ಇರಿಸಲಾಗಿದೆ. ರಾತ್ರಿ ಗಸ್ತಿಗಾಗಿ ಸಿಬ್ಬಂದಿ ನಿಯೋಜಿಸಲಾಗಿದೆ. ಇಲಾಖೆಗೆ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ 94829 79112, 99023 17536 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT