ತುಮಕೂರು: ಅಕ್ರಮವಾಗಿ ಭೂ ಪರಿವರ್ತನೆ ಮಾಡಿಕೊಟ್ಟು ನೂರಾರು ಕೋಟಿ ಬೆಲೆ ಬಾಳುವ ಭೂಮಿಯನ್ನು ದೋಚಲು ಸಹಕರಿಸಿರುವ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಸೇರಿದಂತೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಅಮಾನತು ಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಜ್ಞಾನಸಿಂಧು ಸ್ವಾಮಿ ಒತ್ತಾಯಿಸಿದ್ದಾರೆ.

ಮಧುಗಿರಿ ತಾಲ್ಲೂಕು ತುಮ್ಮಲು ಗ್ರಾಮದ ವ್ಯಾಪ್ತಿಯಲ್ಲಿ 40 ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಭೂ ಪರಿವರ್ತನೆ ಮಾಡಿಕೊಡಲು ನೆರವಾದ ಎಲ್ಲ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು, ಕ್ರಮಕ್ಕೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಆಸ್ತಿಯ ದುರುಪಯೋಗ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಸರ್ಕಾರದ ಆಡಳಿತದ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವಂತಹ ಆತಂಕಕಾರಿ ಬೆಳವಣಿಗೆಯಾಗಿದೆ. ಅಕ್ರಮ ನಡೆದಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಗಂಭೀರ ಸ್ವರೂಪದ ಇಂತಹ ಪ್ರಕರಣಗಳು ಸಾರ್ವಜನಿಕ ಆಡಳಿತದ ಮೇಲೆ ಜನರ ವಿಶ್ವಾಸವನ್ನು ಘಾಸಿಗೊಳಿಸುತ್ತವೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಕ್ರಮದಲ್ಲಿ ಭಾಗಿಯಾಗಿರುವುದು ಮೇಲು ನೋಟಕ್ಕೆ ಕಂಡು ಬರುತ್ತದೆ. ಖಾಸಗಿ ವ್ಯಕ್ತಿಗಳು ಪಹಣಿ, ಆರ್ಟಿಸಿ, ಇತರೆ ದಾಖಲೆಗಳನ್ನು ವ್ಯವಸ್ಥಿತವಾಗಿ ನಕಲಿಯಾಗಿ ಸೃಷ್ಟಿಸಿದ್ದಾರೆ. ಹಿಂದಿನ ಅಕ್ರಮ ಖಾತೆಯನ್ನು ಸಮರ್ಪಕವಾಗಿ ಪರಿಶೀಲಿಸದೆ ಜಿಲ್ಲಾಧಿಕಾರಿ ಭೂ ಪರಿವರ್ತನೆಗೆ ಅನುಮತಿ ನೀಡಿದ್ದಾರೆ. ಕಂದಾಯ ಇಲಾಖೆ ಉನ್ನತ ಅಧಿಕಾರಿಯಾಗಿ, ಸರ್ಕಾರಿ ಭೂಮಿ ರಕ್ಷಣೆ ಮಾಡುವುದು ಪ್ರಮುಖ ಜವಾಬ್ದಾರಿ ಆಗಿರುತ್ತದೆ. ಈ ಪ್ರಕರಣದಲ್ಲಿ ಅವರ ನಿರ್ಲಕ್ಷ್ಯ, ಉದ್ದೇಶಪೂರ್ವಕ ಸಹಕಾರ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಆರೋಪಿಸಿದ್ದಾರೆ.

ಸೀರೆ ಶಾಲು ಪೇಟ ನೀಡಿ ಸನ್ಮಾನ

ಭೂ ಪರಿವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 11ರ ಒಳಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಜ್ಞಾನಸಿಂಧು ಸ್ವಾಮಿ ಆಗ್ರಹಿಸಿದ್ದಾರೆ.

ಜುಲೈ 11ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಕೆಆರ್ಎಸ್ ಪಕ್ಷದಿಂದ ಶುಭ ಕಲ್ಯಾಣ್ ಅವರಿಗೆ ರೇಷ್ಮೆ ಸೀರೆ ಶಾಲು ಪೇಟ ಕೊಟ್ಟು ನಾಗರಿಕ ಸನ್ಮಾನ ಮಾಡಲಾಗುವುದು. ಅವರ ಭಾವಚಿತ್ರವನ್ನು ನಗರದಲ್ಲಿ ಮೆರವಣಿಗೆ ಮಾಡಿ ಭೂ ಕಬಳಿಕೆಗೆ ಸಹಾಯ ಮಾಡಿರುವುದನ್ನು ತಮಟೆ ಹೊಡೆದು ಸಾರಲಾಗುವುದು ಎಂದು ತಿಳಿಸಿದ್ದಾರೆ.

ಅಧಿಕಾರಿಗಳು ಜಿಲ್ಲೆಯಿಂದ ಬೇರೆಡೆಗೆ ವರ್ಗಾವಣೆಯಾಗಿ ಹೋಗುತ್ತಾರೆ. ಜಿಲ್ಲಾಧಿಕಾರಿ ವರ್ಗಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಅಕ್ರಮ ಎಸಗಿ ಬೇರೆಡೆಗೆ ಹೋದರೆ ಜಿಲ್ಲೆಯಲ್ಲಾದ ಅನ್ಯಾಯಕ್ಕೆ ಯಾರು ಹೊಣೆ? ಕೂಡಲೇ ಉನ್ನತ ಸಂಸ್ಥೆಯಿಂದ ತನಿಖೆ ನಡೆಸಬೇಕು. ಕೂಡಲೇ ದೂರು ದಾಖಲಿಸಿಕೊಂಡು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.