ಶನಿವಾರ, ಸೆಪ್ಟೆಂಬರ್ 18, 2021
27 °C

ಅಕ್ರಮ ಮರಳು ಸಾಗಾಟ; 4 ಟ್ರ್ಯಾಕ್ಟರ್ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಶಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿರುವವರ ವಿರುದ್ಧ 4 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮರಳು ತುಂಬಿದ್ದ 4 ಟ್ರ್ಯಾಕ್ಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಕಚೇರಿಯ ವಿಶೇಷ ತಂಡ ಈ ಅಕ್ರಮ ಕಾನೂನು ಬಾಹಿರ ಚಟುವಟಿಕೆ ಮೇಲೆ ದಾಳಿ ನಡೆಸಿದೆ.

ಜೂಜಾಟ: ಜಿಲ್ಲೆಯಾದ್ಯಂತ ಕಳೆದ ಒಂದು ವಾರದಲ್ಲಿ ಮಟ್ಕಾ, ಜೂಜಾಟ ಅಡ್ಡೆಗಳ ಮೇಲೆ ದಾಳಿ ನಡೆಸಿ 8 ಪ್ರಕರಣ ದಾಖಲಿಸಿಕೊಂಡು ₹ 17,940 ಮೊತ್ತವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು