ನೀರಾವರಿ ಯೋಜನೆಗಳ ಅನುಷ್ಠಾನ | ರೈತ ಸಂಘದಿಂದ ತುಮಕೂರು ಡಿಸಿ ಕಚೇರಿಗೆ ಮುತ್ತಿಗೆ

ಮಂಗಳವಾರ, ಜೂಲೈ 16, 2019
25 °C

ನೀರಾವರಿ ಯೋಜನೆಗಳ ಅನುಷ್ಠಾನ | ರೈತ ಸಂಘದಿಂದ ತುಮಕೂರು ಡಿಸಿ ಕಚೇರಿಗೆ ಮುತ್ತಿಗೆ

Published:
Updated:

ತುಮಕೂರು: ಹೇಮಾವತಿ ನಾಲಾ ಅಗಲೀಕರಣ, ತುಂಗಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ತುರ್ತು ಅನುಷ್ಠಾನ ಮಾಡಬೇಕು, ಭೂ ಸ್ವಾಧೀನ ಕಾಯ್ದೆಗೆ ಸರ್ಕಾರ ತಂದಿರುವ ತಿದ್ದುಪಡಿ ವಾಪಸ್ ಪಡೆಯಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.

ನಗರದ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಹಾಗೂ ಅಕ್ಕಪಕ್ಕದ ಜಿಲ್ಲೆಯ ರೈತರು ಭಾಗವಹಿಸಿದ್ದರು.

ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾ ಘಟಕ ಅಧ್ಯಕ್ಷ ಎ.ಗೋವಿಂದರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ನೂಲೆನೂರು ಶಂಕರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !