ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಸಿದ್ಧಾರ್ಥ ಆಸ್ಪತ್ರೆಯಲ್ಲಿ 6ರಂದು ಎನ್‍ಐಸಿಯು ಉದ್ಘಾಟನೆ

Published 5 ಮೇ 2024, 6:05 IST
Last Updated 5 ಮೇ 2024, 6:05 IST
ಅಕ್ಷರ ಗಾತ್ರ

ತುಮಕೂರು: ನಗರದ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನವಜಾತ ಶಿಶು ಆರೈಕೆ ಘಟಕ (ಎನ್‍ಐಸಿಯು), ಮಕ್ಕಳ ತೀವ್ರ ನಿಗಾ ಘಟಕ (ಪಿಐಸಿಯು), ಹೆರಿಗೆ ಕೊಠಡಿ, ಚಿಕಿತ್ಸಾ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಪ್ರಯೋಗಾಲಯ ಉದ್ಘಾಟನಾ ಕಾರ್ಯಕ್ರಮವು ಮೇ 6ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಸಾಹೇ ವಿ.ವಿ ಕುಲಾಧಿಪತಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಕನ್ನಿಕಾ ಪರಮೇಶ್ವರ, ಸಾಹೇ ವಿ.ವಿ ಕುಲಪತಿ ಕೆ.ಬಿ.ಲಿಂಗೇಗೌಡ, ರಿಜಿಸ್ಟ್ರಾರ್‌ ಎಂ.ಝೆಡ್.ಕುರಿಯನ್ ಇತರರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಿ.ಸಾಣಿಕೊಪ್ಪ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆಸ್ಪತ್ರೆಯಲ್ಲಿ ಆಧುನಿಕ ಉಪಕರಣ ಅಳವಡಿಸಿಕೊಳ್ಳಲಾಗಿದೆ. ಚಿಕಿತ್ಸಾ ವಿಧಾನ ಮೇಲ್ದರ್ಜೆಗೇರಿಸಿ ಬಡವರಿಗೂ ಲಭ್ಯವಾಗುವ ದರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಹೊಸ ಘಟಕಗಳು ಹಲವರಿಗೆ ನೆರವಾಗಲಿವೆ ಎಂದು ತಿಳಿಸಿದರು.

ವೈದ್ಯಕೀಯ ಮೇಲ್ವಿಚಾರಕ ಡಾ.ಎನ್‌.ಎಸ್‌.ವೆಂಕಟೇಶ್‌, ‘ಸಿದ್ಧಾರ್ಥ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ನುರಿತ ವೈದ್ಯರ ತಂಡ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಉಪಪ್ರಾಂಶುಪಾಲ ಡಾ.ಜಿ.ಎನ್‌.ಪ್ರಭಾಕರ್‌, ವೈದ್ಯರಾದ ಇಂದಿರಾ, ಡಾ.ಶಿವಾನಂದ, ಡಾ.ಕಿರಣ್‌, ಡಾ.ಅರುಣ್, ಡಾ.ಪ್ರಸನ್ನಕುಮಾರ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT