ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಅರಿವಿನ ಕೊರತೆಯಿಂದ ಕ್ಯಾನ್ಸರ್‌ ಹೆಚ್ಚಳ

Published 29 ಫೆಬ್ರುವರಿ 2024, 8:06 IST
Last Updated 29 ಫೆಬ್ರುವರಿ 2024, 8:06 IST
ಅಕ್ಷರ ಗಾತ್ರ

ತುಮಕೂರು: ಪ್ರಾರಂಭಿಕ ಹಂತದಲ್ಲಿಯೇ ಕ್ಯಾನ್ಸರ್‌ ಪತ್ತೆ ಹಚ್ಚಿದರೆ ಚಿಕಿತ್ಸೆಯಿಂದ ರೋಗ ನಿವಾರಿಸಬಹುದು. ಜನರಲ್ಲಿ ಅರಿವಿನ ಕೊರತೆಯಿಂದ ಕ್ಯಾನ್ಸರ್‌ ಪ್ರಕರಣಗಳು ಹೆಚ್ಚುತ್ತಿವೆ ಎಂದು ಯಶವಂತಪುರದ ಮಣಿಪಾಲ್ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ.ಎ.ಸತೀಶ್‍ಕುಮಾರ್‌ ಇಲ್ಲಿ ಬುಧವಾರ ಹೇಳಿದರು.

ಲ್ಯುಕೇಮಿಯಾ, ಲಿಂಫೋಮಾ ಮತ್ತು ಮಲ್ಟಿಪಲ್ ಮೈಲೋಮಾ ಕ್ಯಾನ್ಸರ್‌ಗಳು ಭಿನ್ನವಾಗಿರುತ್ತವೆ. ಮಲ್ಟಿಮೋಡಲ್ ಚಿಕಿತ್ಸೆಯೊಂದಿಗೆ ಕ್ಯಾನ್ಸರ್‌ ಗುಣಪಡಿಸಬಹುದು ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ವೈದ್ಯ ರಾಹುಲ್ ಎಸ್.ಕನಕ, ‘ನಿರಂತರವಾಗಿ ಮೂರು ವಾರಗಳ ಕಾಲ ಯಾವುದೇ ವಿವರಿಸಲಾಗದ ಅಸ್ಪಷ್ಟ ರೋಗ ಲಕ್ಷಣಗಳು ಕಂಡು ಬಂದರೆ ತಕ್ಷಣಕ್ಕೆ ವೈದ್ಯರನ್ನು ಭೇಟಿ ಮಾಡಿ ಅಗತ್ಯ ಚಿಕಿತ್ಸೆ ಪಡೆಯಬೇಕು. ಆಗಾಗ ಆರೋಗ್ಯ ತಪಾಸಣೆಗೆ ಒಳಗಾಗಬೇಕು’ ಎಂದು ಸಲಹೆ ಮಾಡಿದರು.

ವೈದ್ಯ ವಿನಯ್‌ ಮುನಿಕೋಟಿ ವೆಂಕಟೇಶ್‌, ‘ಮಣಿಪಾಲ್‌ ಆಸ್ಪತ್ರೆಯಲ್ಲಿ ವಿವಿಧ ಚಿಕಿತ್ಸೆಗಳಿಗೆ ಒಳಗಾಗುವ ರೋಗಿಗಳನ್ನು ಉತ್ತಮವಾಗಿ ಆರೈಕೆ ಮಾಡಲಾಗುತ್ತದೆ. ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯ, ಸುಧಾರಿತ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT