ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲೆಡೆ ಜ್ವರ ಪ್ರಕರಣ ಹೆಚ್ಚಳ

ಇನ್‌ಫ್ಲೂಯೆಂಜಾ ಜ್ವರ: ಅಗತ್ಯ ಕ್ರಮಕ್ಕೆ ಸೂಚನೆ
Last Updated 20 ಮಾರ್ಚ್ 2023, 16:10 IST
ಅಕ್ಷರ ಗಾತ್ರ

ತುಮಕೂರು: ಇನ್‌ಫ್ಲೂಯೆಂಜಾ ಜ್ವರ ಎಲ್ಲೆಡೆ ಹರಡುತ್ತಿದ್ದು, ಜಿಲ್ಲೆಯಲ್ಲಿ ಜ್ವರದ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಸ್‌.ಪಾಟೀಲ ಅಧಿಕಾರಿಗಳಿಗೆ ನಿರ್ದೇಶಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಮಾತನಾಡಿದರು.

ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ ಭಾಗಗಳಲ್ಲಿ ಇನ್‌ಫ್ಲೂಯೆಂಜಾ ಜ್ವರ ಹರಡುತ್ತಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸಾಂಕ್ರಾಮಿಕ ರೋಗದ ಕಡಿವಾಣಕ್ಕೆ ಎಲ್ಲರು ಮುಂದಾಗಬೇಕು. ಕೆಮ್ಮು, ಶೀತ ಇದ್ದವರು ಮಾಸ್ಕ್ ಧರಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಆರೋಗ್ಯ ಕಾರ್ಯಕರ್ತೆಯರು ಇನ್‌ಫ್ಲೂಯೆಂಜಾ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಬೇಕು ಎಂದು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ತುಮಕೂರು ನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಕರಣಗಳು ಬಾಕಿ ಇದ್ದು, ಮಹಾನಗರ ಪಾಲಿಕೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಪಾವಗಡ, ಶಿರಾ, ಮಧುಗಿರಿ ಗಡಿ ಭಾಗದ ತಾಲ್ಲೂಕುಗಳಲ್ಲಿ ಈಗಾಗಲೇ ಗಡಿ ಸಭೆ ನಡೆಸಿ, ಚೆಕ್‍ಪೋಸ್ಟ್‌ ಆರಂಭಿಸಲಾಗಿದೆ. ಚೆಕ್‍ಪೋಸ್ಟ್‌ಗಳಿಗೆ ನಿಯಮಿತವಾಗಿ ಅಧಿಕಾರಿಗಳನ್ನು ನೇಮಿಸಬೇಕು ಎಂದು ಸೂಚನೆ ನೀಡಿದರು.

ಸಿಇಒ ಕೆ.ವಿದ್ಯಾಕುಮಾರಿ, ‘ಶಾಚಾಲಯಗಳು ಇಲ್ಲದ ಸರ್ಕಾರಿ ಶಾಲೆಗಳನ್ನು ಗುರುತಿಸಿ ನರೇಗಾ ಯೋಜನೆಯಡಿ ಶೌಚಾಲಯ ನಿರ್ಮಿಸಬೇಕು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT