ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ರಸ್ತೆ ಉಬ್ಬುಗಳಿಂದ ಹೆಚ್ಚಿದ ಅಪಘಾತ

Last Updated 13 ಮಾರ್ಚ್ 2021, 3:49 IST
ಅಕ್ಷರ ಗಾತ್ರ

ತಿಪಟೂರು: ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಹಾಕಿರುವ ರಸ್ತೆ ಉಬ್ಬುಗಳು ಅವೈಜ್ಞಾನಿಕವಾಗಿದ್ದು, ಪಾದಚಾರಿಗಳು, ವಾಹನ ಸವಾರರು ಅಪಘಾತಕ್ಕಿಡಾಗುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ನಗರದಲ್ಲಿ 6ರಿಂದ 7 ಕಡೆಗಳಲ್ಲಿ ರಸ್ತೆ ಉಬ್ಬುಗಳನ್ನು ಹಾಕಲಾಗಿದೆ. ರಾಷ್ಟ್ರೀಯ ಹೆದ್ದಾರಿ ನಿಯಮದ ಪ್ರಕಾರ ಇಲ್ಲಿ ಉಬ್ಬುಗಳನ್ನು ಹಾಕುವಂತೆಯೇ ಇಲ್ಲ. ಹಾಕಿದರೂ, ವಾಹನ ಸವಾರರಿಗೆ ತಿಳಿಯುವಂತೆ ಕೆಲ ಸೂಚನೆಗಳನ್ನು ಹಾಕಬೇಕು. ಆದರೆ ನಗರದಲ್ಲಿ ಹಾಕಿರುವ ಉಬ್ಬುಗಳಿಗೆ ಯಾವುದೇ ಸೂಚನಾ ಫಲಕ ಅಳವಡಿಸಿಲ್ಲ. ಉಬ್ಬುಗಳಿಗೆ ಬಣ್ಣ ಹಾಕದಿರುವುದು ಹಲವು ಅಪಘಾತಗಳಿಗೆ ಕಾರಣವಾಗಿದೆ.

ನಗರದ ಪ್ರದೇಶದ ಶಾಲೆ, ಆಸ್ಪತ್ರೆ, ಸರ್ಕಾರಿ ಕಚೇರಿಗಳ ಬಳಿ ಉಬ್ಬುಗಳನ್ನು ಹಾಕಿರುವುದು ಅನುಕೂಲಕರ. ಆದರೆ ಆ ಉಬ್ಬುಗಳು ವಾಹನ ಸವಾರರ ಸುಗಮ ಸಂಚಾರಕ್ಕೆ ತಡೆಯಾಗಬಾರದು. ಈಗಾಗಲೇ ಹಲವು ಬಾರಿ ಸಾರ್ವಜನಿಕರೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸಾರ್ವಜನಿಕರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವ ಸ್ಥಳಗಳಲ್ಲಿಯೂ ಸರಿಯಾದ ಮಾರ್ಗಸೂಚಿ ಹಾಕದಿರುವುದು ವಾಹನ ಸವಾರರಿಗೆ ವಾಹನ ಚಾಲನೆ ಸವಾಲಾಗಿ ಪರಿಣಮಿಸಿದೆ. ರಸ್ತೆ ಗುಂಡಿ, ಅವೈಜ್ಞಾನಿಕ ರಸ್ತೆ ಉಬ್ಬುಗಳ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎನ್ನುವುದು ಸಾರ್ವಜನಿರ ಒತ್ತಾಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT