ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು ಲೋಕಸಭಾ ಕ್ಷೇತ್ರ | ಹೆಚ್ಚಾದ ಮೈತ್ರಿ ಕೂಟದ ಮತ

Published 5 ಜೂನ್ 2024, 6:49 IST
Last Updated 5 ಜೂನ್ 2024, 6:49 IST
ಅಕ್ಷರ ಗಾತ್ರ

ಕುಣಿಗಲ್: ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನಲ್ಲಿ ಮೈತ್ರಿಕೂಟದ ಮತಗಳು ಹೆಚ್ಚಾಗಿವೆ. ಕಾಂಗ್ರೆಸ್ ಮತಗಳು ಕಡಿಮೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಗೆಲವು ಸಾಧಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಡಾ.ರಂಗನಾಥ 74,724 ಮತ ಪಡೆದಿದ್ದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ ಅವರಿಗೆ 73,381 ಮತಗಳು ಬಂದಿವೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಡಿ.ಕೃಷ್ಣಕುಮಾರ್ 48,151, ಜೆಡಿಎಸ್ ಅಭ್ಯರ್ಥಿ ಡಾ.ರವಿ.ನಾಗರಾಜಯ್ಯ 46,974 ಮತಗಳು ಬಂದಿದ್ದವು. ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ 97,257 ಮತ ಪಡೆದಿದ್ದಾರೆ. ಒಟ್ಟಿನಲ್ಲಿ ಡಾ.ಸಿ.ಎನ್. ಮಂಜುನಾಥ್ ಕುಣಿಗಲ್ ತಾಲ್ಲೂಕಿನಲ್ಲಿ 23 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT