ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಲ್ಲಿ ಹೆಚ್ಚಿದ ಮಾನಸಿಕ ರೋಗ: ನೂರುನ್ನೀಸಾ ಆತಂಕ

Published 25 ಏಪ್ರಿಲ್ 2024, 14:17 IST
Last Updated 25 ಏಪ್ರಿಲ್ 2024, 14:17 IST
ಅಕ್ಷರ ಗಾತ್ರ

ತುಮಕೂರು: ಇತ್ತೀಚೆಗೆ ಮಕ್ಕಳಲ್ಲಿ ಆಟಿಸಂ ನಂತಹ ಮಾನಸಿಕ ರೋಗಗಳು ಉಲ್ಬಣಿಸುತ್ತಿವೆ. ಇವುಗಳ ಹತೋಟಿಗೆ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದ್ದರೂ ಜಾಗೃತಿಯ ಕೊರತೆಯಿಂದ ಗ್ರಾಮೀಣ ಭಾಗದ ಮಕ್ಕಳಲ್ಲಿ ಸಮಸ್ಯೆ ಹೆಚ್ಚುತ್ತಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಆತಂಕ ವ್ಯಕ್ತಪಡಿಸಿದರು.

ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಗುರುವಾರ ವಿಶ್ವ ಆಟಿಸಂ ದಿನದ ಅಂಗವಾಗಿ ಸಹಾಯವಾಣಿಗೆ ಚಾಲನೆ ನೀಡಿ ಮಾತನಾಡಿದರು.

ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್‌, ‘ಮಕ್ಕಳನ್ನು ಆಟಿಸಂ ಸಮಸ್ಯೆಯಿಂದ ಹೊರತರಲು 0816-2602222 ಸಹಾಯವಾಣಿ ಆರಂಭಿಸಲಾಗಿದೆ. ಪೋಷಕರು ಕರೆ ಮಾಡಿ ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು’ ಎಂದರು.

ಮಾನಸಿಕ ರೋಗ ತಜ್ಞ ಡಾ.ಕೀರ್ತಿಸುಂದರ್‌, ‘ದೇಶದ ಪ್ರತಿ 68 ಮಕ್ಕಳಲ್ಲಿ ಒಬ್ಬರಿಗೆ ಆಟಿಸಂ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಮಕ್ಕಳು ಕಣ್ಣಲ್ಲಿ ಕಣ್ಣಿಟ್ಟು ಮಾತನಾಡಲು ಅಂಜುವುದು, ಮಾತನಾಡುವುದಕ್ಕೆ ಸಮಯ ತೆಗೆದುಕೊಳ್ಳುವುದು, ಮಾಡಿದ ಕೆಲಸವನ್ನು ಪದೇ ಪದೇ ಮಾಡುವುದು ಆಟಿಸಂನ ಪ್ರಮುಖ ಲಕ್ಷಣಗಳು. ಸಮಸ್ಯೆ ಗುರುತಿಸಿ ಚಿಕಿತ್ಸೆ ನೀಡಿದರೆ ಗುಣಮುಖರಾಗುತ್ತಾರೆ’ ಎಂದು ತಿಳಿಸಿದರು.

ಸಿದ್ಧಗಂಗಾ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಾದ ಡಾ.ಶಾಲಿನಿ, ವೈದ್ಯಕೀಯ ಅಧೀಕ್ಷಕ ಡಾ.ನಿರಂಜನಮೂರ್ತಿ, ವಕೀಲರಾದ ಹಿಮಾನಂದ್‌ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT