ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚಿದ ಪೋಕ್ಸೊ ಪ್ರಕರಣ

ಎರಡು ವರ್ಷದಲ್ಲಿ 209 ಪೋಕ್ಸೊ ಪ್ರಕರಣ ದಾಖಲು, ನಿಲ್ಲದ ಮಕ್ಕಳ ಮೇಲಿನ ದೌರ್ಜನ್ಯ
Published 10 ಮೇ 2023, 8:05 IST
Last Updated 10 ಮೇ 2023, 8:05 IST
ಅಕ್ಷರ ಗಾತ್ರ

ಮೈಲಾರಿ ಲಿಂಗಪ್ಪ

ತುಮಕೂರು: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಶೋಷಣೆ ತಡೆಯುವ ನಿಟ್ಟಿನಲ್ಲಿ ಪೋಕ್ಸೊ ಕಾಯ್ದೆ ಜಾರಿಯ ಹೊರತಾಗಿಯೂ ಜಿಲ್ಲೆಯಲ್ಲಿ ಬಾಲಕಿಯರ ಮೇಲಿನ ದೌರ್ಜನ್ಯ, ಅತ್ಯಾಚಾರ, ಶೋಷಣೆ ಹೆಚ್ಚುತ್ತಲೇ ಇವೆ. ಪೋಕ್ಸೊ ಕಾಯ್ದೆ ಅಡಿ ಜಿಲ್ಲೆಯಲ್ಲಿ ಕಳೆದ ಆರು ವರ್ಷದಲ್ಲಿ 412 ಪ್ರಕರಣ ದಾಖಲಾಗಿವೆ.

18 ವರ್ಷದ ಒಳಗಿನ ಮಕ್ಕಳ ಉದ್ದೇಶದಿಂದ ಜಾರಿಗೆ ತಂದಿರುವ ಪೋಕ್ಸೊ (ಪ್ರೊಟೆಕ್ಷನ್‌ ಆಫ್‌ ಚಿಲ್ಡ್ರನ್‌ ಫ್ರಮ್‌ ಸೆಕ್ಷುಯಲ್‌ ಅಫೆನ್ಸಸ್‌) ಕಾಯ್ದೆಯಡಿ ಮಕ್ಕಳ ಮೇಲಿನ ಅತ್ಯಾಚಾರ, ಶೋಷಣೆ ತಡೆಯುವುದು, ದೌರ್ಜನ್ಯ ಎಸಗಿದವರಿಗೆ ಶಿಕ್ಷೆ ವಿಧಿಸುವ ಕೆಲಸವಾಗುತ್ತಿದೆ. ಈ ಬಗ್ಗೆ ಅರಿವಿದ್ದರೂ ದೌರ್ಜನ್ಯ ಕಡಿಮೆಯಾಗಿಲ್ಲ.

2021 ಹಾಗೂ 2022ರಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಈ ಎರಡು ವರ್ಷಗಳಲ್ಲಿ ಜಿಲ್ಲೆಯ ವಿವಿಧೆಡೆ 209 ಪ್ರಕರಣ  ದಾಖಲಾಗಿವೆ. ಕುಟುಂಬದ ಸದಸ್ಯರು, ಅಕ್ಕಪಕ್ಕದ ಮನೆಯವರಿಂದಲೇ ಮಕ್ಕಳು ಲೈಂಗಿಕ ಶೋಷಣೆ, ಅತ್ಯಾಚಾರಕ್ಕೆ ಒಳಗಾಗುತ್ತಿರುವುದು ವರದಿಯಾಗಿದೆ.

ಕೋವಿಡ್‌ ಸಮಯದಲ್ಲಿ ಹೆಚ್ಚು: ಕೋವಿಡ್‌ ಸಮಯದಲ್ಲಿ ಪೋಕ್ಸೊ ಪ್ರಕರಣ ಹೆಚ್ಚು ವರದಿಯಾಗಿವೆ. ಕೊರೊನಾ ನಿಯಂತ್ರಣಕ್ಕಾಗಿ ಮನೆಯಿಂದ ಹೊರ ಬರದಂತೆ ನಿರ್ಬಂಧ ವಿಧಿಸಲಾಗಿತ್ತು. ಈ ವೇಳೆಯಲ್ಲೇ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚು ದಾಖಲಾಗಿವೆ.

ತುಮಕೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿ ಮೇಲೆ ಸಂಶೋಧನಾ ವಿದ್ಯಾರ್ಥಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣ ಈಚೆಗೆ ವರದಿಯಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT