ಸ್ವಾತಂತ್ರ್ಯ ಹಬ್ಬಕ್ಕೆ ಭರ್ಜರಿ ಸಿದ್ಧತೆ

7
ಆಲಂಕಾರಿಕ ವಸ್ತುಗಳ ಮಾರಾಟ ಜೋರು, ಪರೇಡ್, ಸಾಂಸ್ಕೃತಿಕ ತಂಡಗಳಿಂದ ಆಭ್ಯಾಸ, ಸಿದ್ಧತೆಯಲ್ಲಿ ತೊಡಗಿದ ಅಧಿಕಾರಿ, ಸಿಬ್ಬಂದಿ ವರ್ಗ

ಸ್ವಾತಂತ್ರ್ಯ ಹಬ್ಬಕ್ಕೆ ಭರ್ಜರಿ ಸಿದ್ಧತೆ

Published:
Updated:

ತುಮಕೂರು: ಸ್ವಾತಂತ್ರ್ಯ ದಿನ ಅದ್ಧೂರಿಯಾಗಿ ಆಚರಣೆ ಮಾಡಲು ಸಿದ್ಧತೆಗಳು ಭರ್ಜರಿಯಾಗಿ ನಡೆಯುತ್ತಿದ್ದು, ಹಬ್ಬದ ಸಂಭ್ರಮ ಎರಡು ದಿನ ಮೊದಲೇ ಎಲ್ಲೆಲ್ಲೂ ಕಂಡು ಬರುತ್ತಿದೆ.

ನಗರದ ಪ್ರಮುಖ ರಸ್ತೆಗಳು, ಶಾಲಾ, ಕಾಲೇಜುಗಳು, ಮಾರುಕಟ್ಟೆ ಪ್ರದೇಶಗಳಲ್ಲಿ ಸ್ವಾತಂತ್ರ್ಯ ದಿನೋತ್ಸವ ಆಲಂಕಾರಿಕ ವಸ್ತುಗಳ ಮಾರಾಟ ಜೋರಾಗಿದೆ. ಕೇಸರಿ, ಬಿಳಿ, ಹಸಿರು ಬಣ್ಣದ ಬಾವುಟ, ಇದೇ ಬಣ್ಣದ ರಿಬ್ಬನ್, ಟಿ ಶರ್ಟ್ ಸೇರಿದಂತೆ ಹಲವು ಬಗೆಯ ವಸ್ತುಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.

ಶಾಲಾ ಮಕ್ಕಳು, ಯುವಕರು ಅಂಗಡಿಗಳಿಗೆ ತೆರಳಿ ಖರೀದಿಸುತ್ತಿದ್ದಾರೆ. ಮತ್ತೊಂದೆಡೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ. ತಂಪು ವಾತಾವರಣ, ಸೋನೆ ಮಳೆಯಲ್ಲಿಯೇ ಸಿದ್ಧತೆಗಳನ್ನು ಅಧಿಕಾರಿಗಳು, ಸಿಬ್ಬಂದಿ ಮಾಡುತ್ತಿದ್ದಾರೆ.

ವಿಶೇಷವಾಗಿ ಸ್ವಾತಂತ್ರ್ಯ ದಿನ ನಡೆಯುವ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ತಂಡಗಳು ಸೋಮವಾರ ಕ್ರೀಡಾಂಗಣದಲ್ಲಿ ದಿನಪೂರ್ತಿ ಅಭ್ಯಾಸ ನಡೆಸಿದವು.

ಸಾಂಸ್ಕೃತಿಕ ಕಾರ್ಯಕ್ರಮ: ಆ.15ರಂದು ಸಂಜೆ 4.30ಕ್ಕೆ ಗಾಜಿನ ಮನೆಯಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !