ಭಾನುವಾರ, ಅಕ್ಟೋಬರ್ 17, 2021
23 °C

ಸ್ಮಶಾನಕ್ಕೆ ಸ್ಥಳ ಮಂಜೂರಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ಕೆ. ಸೇವಾಲಾಲ್‌ ಪುರ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗ ಮಂಜೂರು ಮಾಡಿಸಿಕೊಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಮಂಗಳವಾರ ಶಾಸಕ ವೆಂಕಟರವಣಪ್ಪ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ ಸುಮಾರು 500 ಮನೆಗಳಿದ್ದು, 2,000ಕ್ಕೂ ಹೆಚ್ಚಿನ ಜನಸಂಖ್ಯೆ ಇದೆ. ಯಾರಾದರೂ ಮೃತಪಟ್ಟರೆ ಜಮೀನು ಇರುವವರು ತಮ್ಮ ಕೃಷಿ ಭೂಮಿಗಳಲ್ಲಿ ಅಂತ್ಯಕ್ರಿಯೆ ನಡೆಸುತ್ತಾರೆ. ಜಮೀನು ಇಲ್ಲದವರು ಎಲ್ಲಿ ಅಂತ್ಯ ಸಂಸ್ಕಾರ ನಡೆಸಬೇಕು ಎಂದು ದಿಕ್ಕುತೋಚದೆ ಅಂತ್ಯಕ್ರಿಯೆ ಮಾಡಲಾಗದೆ ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡರು. ಗ್ರಾಮದ ಸಮೀಪ ಇರುವ ಅರಣ್ಯ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳು ಆಕ್ಷೇಪಿಸುತ್ತಾರೆ. ಮೃತಪಟ್ಟ ವ್ಯಕ್ತಿಯನ್ನೂ ಗೌರವಯುತ ವಾಗಿ ಅಂತ್ರಕ್ರಿಯೆ ಮಾಡದ ಸ್ಥಿತಿ ಗ್ರಾಮದಲ್ಲಿದೆ ಎಂದು ಅಳಲು ತೋಡಿಕೊಂಡರು.

ಕೂಡಲೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸ್ಮಶಾನಕ್ಕೆ ಜಾಗ ನಿಗದಿಪಡಿಸಬೇಕು ಎಂದು ಸೂಚಿಸಿ ಸಮಸ್ಯೆ ಪರಿಹರಿಸಿಕೊಡಬೇಕು ಎಂದು ಒತ್ತಾಯಿಸಿದರು. ಗ್ರಾ.ಪಂ. ಸದಸ್ಯ ಕಾಳ್ಯಾನಾಯ್ಕ, ಉಪಾಧ್ಯಕ್ಷೆ ಸರೋಜಿ ಬಾಯಿ, ಮುಖಂಡ ಡಾಕುನಾಯ್ಕ, ಕೃಷ್ಣಾನಾಯ್ಕ, ರಂಗಾನಾಯ್ಕ, ಶ್ರೀನಿವಾಸನಾಯ್ಕ, ಸುಬ್ರಮಣಿ, ಧರ್ಮಾನಾಯ್ಕ, ಶ್ರೀರಾಮನಾಯ್ಕ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.