ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ: ಮದಲೂರು ಕೆರೆಗೆ ನೀರು ಹರಿಸಿ: ಆಗ್ರಹ

Last Updated 26 ಜುಲೈ 2021, 2:55 IST
ಅಕ್ಷರ ಗಾತ್ರ

ಶಿರಾ: ವಿಧಾನಸಭೆ ಉಪ ಚುನಾವಣೆಯ ಸಮಯದಲ್ಲಿ ಮುಖ್ಯಮಂತ್ರಿ ಕ್ಷೇತ್ರದ ಜನತೆಗೆ ನೀಡಿದ್ದ ವಾಗ್ದಾನದಂತೆ ಮದಲೂರು ಕೆರೆಗೆ ನೀರು ಹರಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ.

ನಗರದದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮದಲೂರು ಕೆರೆಗೆ ನೀರು ಹರಿಸಿದರೆ ಕಾನೂನು ಕ್ರಮ ತೆಗೆದುಕೊಂಡು ಜೈಲಿಗೆ ಕಳುಹಿಸುವುದಾಗಿ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳುವ ಮೂಲಕ ಮುಖ್ಯಮಂತ್ರಿಯ ಅಧಿಕಾರವನ್ನು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಇಲ್ಲವೇ ಎನ್ನುವ ಪ್ರಶ್ನೆ ಮೂಡುವಂತಾಗಿದೆ ಎಂದರು.

ಉಪ ಚುನಾವಣೆಯಲ್ಲಿ ನೀಡಿದ ವಾಗ್ದಾನದಂತೆ ಮುಖ್ಯಮಂತ್ರಿ ಮದಲೂರು ಕೆರೆಗೆ ಕಳೆದ ವರ್ಷ ನೀರು ಹರಿಸಿದ್ದಾರೆ. ಒಂದು ವೇಳೆ ಇದು ತಪ್ಪು ಎನ್ನುವಂತಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು ಮುಖ್ಯಮಂತ್ರಿ ಹಾಗೂ ಅಧಿಕಾರಿಗಳ ಮೇಲೆ ಯಾವ ಕ್ರಮ ತೆಗೆದುಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಅವರನ್ನು ಕರೆಸಿಕೊಂಡು ಬುದ್ಧಿವಾದ ಹೇಳಬೇಕು ಎಂದರು.

ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಜೈಲಿಗೆ ಹೋಗಲು ಸಿದ್ಧವಾಗಿರುವುದಾಗಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ನೀಡಿರುವ ಹೇಳಿಕೆ ಸ್ವಾಗತಾರ್ಹ. ಒಂದು ವೇಳೆ ಇವರ ನೇತೃತ್ವದಲ್ಲಿ ಪಕ್ಷಾ
ತೀತವಾಗಿ ಹೋರಾಟ ನಡೆದರೆ ಸಂಪೂ
ರ್ಣ ಬೆಂಬಲ‌ ನೀಡಲಾಗುವುದು. ಅಗತ್ಯ
ಬಿದ್ದರೆ ಜೆಡಿಎಸ್‌ನಿಂದಲೂ ಹೋರಾಟ ನಡೆಸಲಾಗುವುದು ಎಂದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಉಗ್ರೇಶ್, ನಗರ ಘಟಕದ ಅಧ್ಯಕ್ಷ ಅಂಜಿನಪ್ಪ, ಮುಖಂಡರಾದ ಆರ್.ರಾಘವೇಂದ್ರ, ಸೋಮಣ್ಣ, ಕೋಟೆ ಮಹದೇವ್, ಸೀಗಲಹಳ್ಳಿ ವೀರೇಂದ್ರ, ನಾಗರಾಜು ಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT